ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವಿಯ ಪ್ರಥಮ -ದ್ವಿತೀಯ ವರ್ಷದ ತರಗತಿ ಸಂಕ್ರಾಂತಿಯಿಂದ ಆರಂಭ: ಅಶ್ವತ್ಥನಾರಾಯಣ

Last Updated 8 ಜನವರಿ 2021, 11:24 IST
ಅಕ್ಷರ ಗಾತ್ರ

ಬೆಂಗಳೂರು: ‘ಪದವಿ ತರಗತಿಗಳ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಮುಂದಿನ ಸಂಕ್ರಾಂತಿ ಬಳಿಕ ಭೌತಿಕ ತರಗತಿ (ಆಫ್‌ಲೈನ್‌) ಪ್ರಾರಂಭಿಸಲಾಗುವುದು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

ನಗರದಲ್ಲಿ ಶುಕ್ರವಾರ ಸರ್ಕಾರಿ ಮತ್ತು ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ ಸಂಬಂಧಿತ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ನಂತರ ಅವರು ಈ ಮಾಹಿತಿ ನೀಡಿದರು.

ಪದವಿಯ ಪ್ರಥಮ, ದ್ವಿತೀಯ ತರಗತಿಗಳು ಅರಂಭವಾಗದಿದ್ದರಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ‘ಪಾಠ ಕೇಳದೆ ಪರೀಕ್ಷೆ ಬರೆಯುವ ಸವಾಲು’ ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿತ್ತು.

‘ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್‌ ತರಗತಿಗಳ ಅಂತಿಮ ವರ್ಷದ ಮತ್ತು ಅಂತಿಮ ಸೆಮಿಸ್ಟರ್‌ನ ಆಫ್‌ಲೈನ್‌ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ’ ಎಂದೂ ಅವರು ಹೇಳಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕುಲಪತಿಗಳು ನೇರ ತರಗತಿಗಳನ್ನು ಆರಂಭಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದರು. ಹೀಗಾಗಿ ಅದಕ್ಕೆ ಸಂಬಂಧಿಸಿದ ವರದಿಯನ್ನು ಕೂಡಲೇ ಕಳಿಸುವಂತೆ ಕೋರಲಾಗಿದೆ ಎಂದರು.

ಪರೀಕ್ಷೆ ಮತ್ತು ಮುಂದಿನ ಶೈಕ್ಷಣಿಕ ವರ್ಷ: ಸಭೆಯಲ್ಲಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ಮಹತ್ವದ ಚರ್ಚೆ ನಡೆಯಿತು. ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು ಎಂದು ಅಶ್ವತ್ಥನಾರಾಯಣ ಹೇಳಿದರು.

‘ಆನ್‌ಲೈನ್‌ ಪರೀಕ್ಷೆಗಳಿಗಿಂತ ಪೆನ್‌ ಮತ್ತು ಪೇಪರ್‌ ಆಧಾರಿತ ಆಫ್‌ಲೈನ್‌ ಪರೀಕ್ಷೆಯೇ ಉತ್ತಮ ಎಂದು ವಿಟಿಸಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸೇರಿದಂತೆ ಎಲ್ಲ ಕುಲಪತಿ, ಕುಲ ಸಚಿವರು ಸಲಹೆ ಮಾಡಿದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ. ಯುಜಿಸಿ ನಿಯಮದಂತೆ ಮಾರ್ಚ್‌ನಲ್ಲಿ ಪರೀಕ್ಷೆ ಮುಗಿಯಬೇಕಾಗುತ್ತದೆ. ಆದರೆ, ಇನ್ನು ಹಲವಾರು ವಿವಿಗಳ ವ್ಯಾಪ್ತಿಯಲ್ಲಿ ಪಾಠಗಳು ಮುಗಿಯದ ಕಾರಣ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ಪರೀಕ್ಷೆ ನಡೆಸುವ ಬ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT