ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಯು ತರಗತಿ ಇಂದಿನಿಂದ: ಸಮವಸ್ತ್ರ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಮಾರ್ಗಸೂಚಿ

Last Updated 8 ಜೂನ್ 2022, 19:34 IST
ಅಕ್ಷರ ಗಾತ್ರ

ಬೆಂಗಳೂರು: ಹಿಜಾಬ್ ವಿವಾದದಲ್ಲಿ ಹೈಕೋರ್ಟ್‌ ನೀಡಿದ ತೀರ್ಪಿನ ನಂತರ, 2022-23ನೇ ಸಾಲಿನ ಪ್ರಥಮ ಮತ್ತು ದ್ವಿತೀಯ ಪಿಯು ತರಗತಿಗಳು ಗುರುವಾರದಿಂದ (ಜೂನ್ 9) ಆರಂಭವಾಗಲಿವೆ.

ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪದವಿಪೂರ್ವ ವಿದ್ಯಾರ್ಥಿಗಳು ಕಾಲೇಜು ಅಭಿವೃದ್ಧಿ ಸಮಿತಿ ಸೂಚಿಸಿದ ಸಮವಸ್ತ್ರ ಧರಿಸುವುದು ಕಡ್ಡಾಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಈಗಾಗಲೇ ಮಾರ್ಗಸೂಚಿ ಹೊರಡಿಸಿದೆ.

‘ಹಿಜಾಬ್’ ವಿವಾದದಂಥ ಘಟನೆ ಮರುಕಳಿಸದಂತೆ ಆರಂಭದಿಂದಲೇ ಎಚ್ಚರಿಕೆ ವಹಿಸಲು ಇಲಾಖೆ ಮುಂದಾಗಿದೆ. ಒಂದು ವೇಳೆ ಕಾಲೇಜು ಅಭಿವೃದ್ಧಿ ಸಮಿತಿ ಅಥವಾ ಆಡಳಿತ ಮಂಡಳಿ ಯಾವುದೇ ಸಮವಸ್ತ್ರ ಸೂಚಿಸದಿದ್ದರೆ, ಸಮಾನತೆ ಮತ್ತು ಏಕತೆ ಕಾಪಾಡುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ಆಗದ ಉಡುಪು ಧರಿಸಬೇಕು ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಪದವಿ ಪೂರ್ವ ತರಗತಿಗೆ ಜೂನ್ 1ರಿಂದ ದಾಖಲಾತಿ ಪ್ರಕ್ರಿಯೆ ಆರಂಭವಾಗಿದ್ದು, ದಂಡ ಶುಲ್ಕವಿಲ್ಲದೆ ದಾಖಲಾತಿ ಪಡೆಯಲು ಜೂನ್ 15 ಕೊನೆಯ ದಿನ.ಬೆಳಿಗ್ಗೆ 9.30ರಿಂದ 3.30ರವರೆಗೆ ಅಥವಾ 10.30ರಿಂದ 4.30ರವರೆಗೆ ತರಗತಿಗಳನ್ನು ನಡೆಸಬೇಕು ಎಂದೂ ಇಲಾಖೆ ಸೂಚಿಸಿದೆ.

ಜೂನ್ 9ರಿಂದ ಸೆ.30ರವರೆಗೆ ಶೈಕ್ಷಣಿಕ ವರ್ಷದ ಮೊದಲ ಅವಧಿ ನಡೆಯಲಿದೆ. ಅ. 13ರಿಂದ 2023ರ ಮಾರ್ಚ್‌ 31ರವರೆಗೆ ಎರಡನೇ ಅವಧಿ. ಅ. 1ರಿಂದ 12ರವೆರೆಗೆ ಮಧ್ಯಂತರ ರಜೆ ಇದ್ದು, 2023 ಏಪ್ರಿಲ್ 1ರಿಂದ ಬೇಸಿಗೆ ರಜೆ ನಿಗದಿಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT