ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಸಪೇಟೆ: ಆರಂಭದಲ್ಲಿ ನಿರಾಕರಣೆ, ನಂತರ‌ ಹಿಜಾಬ್ ಕಳಚಿ ಪರೀಕ್ಷೆಗೆ ಹಾಜರು

ವಿಜಯನಗರ ಕಾಲೇಜಿನಲ್ಲಿ ಘಟನೆ
Last Updated 21 ಮಾರ್ಚ್ 2022, 19:45 IST
ಅಕ್ಷರ ಗಾತ್ರ

ಹೊಸಪೇಟೆ (ವಿಜಯನಗರ): ಪ್ರಾಚಾರ್ಯರ ಮನವೊಲಿಕೆ ನಂತರ ಎಂಟು ವಿದ್ಯಾರ್ಥಿನಿಯರು‌ ಹಿಜಾಬ್ ಕಳಚಿ ನಗರದ ವಿಜಯನಗರ ಕಾಲೇಜಿನಲ್ಲಿ ಸೋಮವಾರ ಪದವಿ ಪರೀಕ್ಷೆಗೆ ಹಾಜರಾದರು.

ಹಿಜಾಬ್ ಧರಿಸಿ ಪರೀಕ್ಷೆಗೆ ಹಾಜರಾಗಲು ವಿದ್ಯಾರ್ಥಿನಿಯರು ಮುಂದಾಗಿದ್ದರು. ಆದರೆ, ಪ್ರಾಚಾರ್ಯ ವಿ.ಎಸ್. ಪ್ರಭಯ್ಯ, ಅವರನ್ನು ತಡೆದು, ‘ನ್ಯಾಯಾಲಯದ ಆದೇಶ ಪಾಲಿಸಬೇಕು’ ಎಂದು ಹೇಳಿದರು.

ಮಂಗಳೂರಿನಲ್ಲಿ ಅವಕಾಶ ನಿರಾಕರಣೆ: ನಗರದ ವಾಮಂಜೂರಿನ ಸಂತ ರೇಮಂಡ್ಸ್‌ ಕಾಲೇಜಿನಲ್ಲಿ ಸೋಮವಾರ ಹಿಜಾಬ್‌ ಧರಿಸಿದ್ದ ವಿದ್ಯಾರ್ಥಿನಿಯರಿಗೆ ಅರ್ಥಶಾಸ್ತ್ರ ಪರೀಕ್ಷೆಗೆ ಹಾಜರಾಗಲು ಅವಕಾಶ ನಿರಾಕರಿಸಲಾಗಿದೆ. ಹೈಕೋರ್ಟ್‌ ತೀರ್ಪಿನ ಬಳಿಕ ಕಾಲೇಜಿನ ಆಡಳಿತ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದ್ದು, ವಿದ್ಯಾರ್ಥಿನಿಯರು, ಪೋಷಕರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT