ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್ ವಿವಾದ: ಪದವಿ ಕಾಲೇಜಿಗೆ ಹೇಗೆ‌ ಬೇಕಾದರೂ ಬರಲಿ ಎಂದ ಅಶ್ವತ್ಥನಾರಾಯಣ

Last Updated 15 ಫೆಬ್ರುವರಿ 2022, 12:16 IST
ಅಕ್ಷರ ಗಾತ್ರ

ಚಾಮರಾಜನಗರ: ‘ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲ. ವಿದ್ಯಾರ್ಥಿಗಳು ತಮ್ಮ ಇಷ್ಟದ ಉಡುಪನ್ನು ಧರಿಸಿಕೊಂಡು ಹೋಗಬಹುದು. ನಮ್ಮ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯವಿದೆ.ಆದರೆ, ಇದನ್ನು ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು. ಅದಕ್ಕೆಲ್ಲ ನಾವು ಅವಕಾಶ ಮಾಡಿಕೊಡುವುದಿಲ್ಲ’ ಎಂದುಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರು ಮಂಗಳವಾರ ಹೇಳಿದರು.

‘ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಿದೆ. ಹಾಗಾಗಿ, ನಿಯಮಕ್ಕೆ ಅನುಸಾರವಾಗಿಯೇ ಬರಬೇಕು. ಹಿಜಾಬ್ ಧರಿಸುವುದಕ್ಕೆ ಅವಕಾಶ ಕೊಡುವುದಿಲ್ಲ' ಎಂದೂ ಸಚಿವರು ಸ್ಪಷ್ಟಪಡಿಸಿದರು.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, 'ಹಿಜಾಬ್-ಕೇಸರಿ ಶಾಲು ವಿಚಾರದಲ್ಲಿ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ಅದನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು' ಎಂದರು.

'ಬುಧವಾರದಿಂದ ಕಾಲೇಜುಗಳು ಆರಂಭವಾಗಲಿದೆ. ಮುಖ್ಯಮಂತ್ರಿ ಅವರು ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಕಾಲೇಜುಗಳಿಗೆ ಹೊರಗಡೆಯಿಂದ ಬರುವವರಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡುವುದಿಲ್ಲ. ವಿದ್ಯಾರ್ಥಿಗಳು ಯಾವುದೇ ಘಟನೆಗಳಿಗೆ ಅವಕಾಶ ಕೊಡದೆ, ಸೌಹಾರ್ದತೆಯಿಂದ ಕಾಲೇಜುಗಳಿಗೆ ಹಾಜರಾಗಬೇಕು' ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT