ಭಾನುವಾರ, ಜೂನ್ 26, 2022
23 °C

ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಸಿಇಟಿ: ಹಿಜಾಬ್‌ಗೆ ಅವಕಾಶ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆಗೆ (ಸಿಇಟಿ) ಈ ಬಾರಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದಾಗಿದೆ.

ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್‌) ರೀತಿಯಲ್ಲೇ ಪರೀಕ್ಷೆಗಳನ್ನು ನಡೆಸಲು ಪ್ರಾಧಿಕಾರ ಸಿದ್ಧತೆಗಳನ್ನು ಕೈಗೊಂಡಿದೆ. ಅಭ್ಯರ್ಥಿಗಳು ಪ್ರಾಧಿಕಾರ ರೂಪಿಸುವ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹಿಜಾಬ್‌ ಧರಿಸಲು ಅವಕಾಶ ಇಲ್ಲ. ಪರೀಕ್ಷಾ ಕೇಂದ್ರ ಪ್ರವೇಶಕ್ಕೂ ಮುನ್ನ ಹಿಜಾಬ್ ತೆಗೆದಿಡಬೇಕು.

‘ಅಭ್ಯರ್ಥಿಗಳು ಕಿವಿ ಮುಚ್ಚುವ ರೀತಿಯ ಯಾವುದೇ ಬಟ್ಟೆಯನ್ನು ಧರಿಸುವಂತಿಲ್ಲ. ಉದ್ದ ತೋಳಿನ ಅಂಗಿಯನ್ನು ಧರಿಸಬಾರದು. ಅಭ್ಯರ್ಥಿಗಳು ಚಪ್ಪಲಿ ಹಾಕಿಕೊಂಡು ಬರಬೇಕು. ಶೂ ಹಾಕಿಕೊಂಡು ಬರಬಾರದು. ಅಭ್ಯರ್ಥಿಗಳು ಪಾಲಿಸಬೇಕಾದ ನಿಯಮಗಳ ಬಗ್ಗೆ ಶೀಘ್ರ ವಿವರಗಳನ್ನು ಬಿಡುಗಡೆ ಮಾಡಲಾಗುವುದು’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಹಣಾಧಿಕಾರಿ ಎಸ್. ರಮ್ಯಾ ತಿಳಿಸಿದ್ದಾರೆ.

ಜೂನ್‌ 16ರಿಂದ 18ರವರೆಗೆ ರಾಜ್ಯದಾದ್ಯಂತ ಪರೀಕ್ಷೆಗಳು ನಡೆಯಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು