ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್‌: 21 ವಿದ್ಯಾರ್ಥಿನಿಯರು ಮೂರು ತಿಂಗಳಿಂದ ಗೈರು

Last Updated 16 ಜೂನ್ 2022, 20:00 IST
ಅಕ್ಷರ ಗಾತ್ರ

ಮಂಗಳೂರು: ಹಳೆಯಂಗಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಹಿಜಾಬ್‌ ಧರಿಸಲು ಅವಕಾಶ ನೀಡುವಂತೆ ಒತ್ತಾಯಿಸುತ್ತಿದ್ದ 21 ವಿದ್ಯಾರ್ಥಿನಿಯರು ಮೂರು ತಿಂಗಳಿನಿಂದ ತರಗತಿಗಳಿಗೆ ಹಾಜರಾಗುತ್ತಿಲ್ಲ.

ಇವರಲ್ಲಿ ಪ್ರಥಮ ವರ್ಷದ ಪದವಿಯಒಬ್ಬ ವಿದ್ಯಾರ್ಥಿನಿ, ಅಂತಿಮ ವರ್ಷದ ಪದವಿ ಅಧ್ಯಯನ ಮಾಡುತ್ತಿರುವ 19 ವಿದ್ಯಾರ್ಥಿನಿಯರು ಹಾಗೂ ಸ್ನಾತಕೋತ್ತರ ಅಧ್ಯಯನ ಮಾಡುತ್ತಿರುವ ಒಬ್ಬ ವಿದ್ಯಾರ್ಥಿನಿ ಇದ್ದಾರೆ ಎಂದು ಪ್ರಾಂಶುಪಾಲ ಕೆ. ಶ್ರೀಧರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

‘ಬರುವ ಆಗಸ್ಟ್‌ ತಿಂಗಳಲ್ಲಿ ನಡೆಯಲಿರುವ ಪರೀಕ್ಷೆಗೆ ಹಾಜರಾಗಬೇಕಾದರೆ ಶೇ 75ರಷ್ಟು ಹಾಜರಾತಿ ಇರುವುದು ಕಡ್ಡಾಯ. ಈ ವಿದ್ಯಾರ್ಥಿನಿಯರಿಗೆ ಹಾಜರಾತಿಯ ಕೊರತೆ ಆಗಲಿದ್ದು, ಪರೀಕ್ಷೆ ಬರೆಯಲು ಸಾಧ್ಯವಾಗದು’ ಎಂದರು.

‘ತರಗತಿಗೆ ಹಾಜರಾಗುವಂತೆ ವಿದ್ಯಾರ್ಥಿನಿಯರು ಹಾಗೂ ಅವರ ಪಾಲಕರ ಮನವೊಲಿಸುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಪಾಲಕರು ತಮ್ಮ ನಿಲುವಿನಲ್ಲಿ ಬದಲಾವಣೆ ಮಾಡಲು ನಿರಾಕರಿಸಿದ್ದರಿಂದ ನಮ್ಮ ಪ್ರಯತ್ನಗಳೆಲ್ಲ ವಿಫಲವಾದವು. ಈ ಬೆಳವಣಿಗೆಗಳ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕರಿಗೆ ಮಾಹಿತಿ ನೀಡಿದ್ದೇನೆ. ಇವರಲ್ಲಿ ಯಾವ ವಿದ್ಯಾರ್ಥಿನಿಯೂ ಟಿ.ಸಿ. ಪಡೆದಿಲ್ಲ’ ಎಂದು ಶ್ರೀಧರ್‌ ತಿಳಿಸಿದರು.

ಆದರೆ, ‘ಎಲ್ಲಾ 44 ಮುಸ್ಲಿಂ ವಿದ್ಯಾರ್ಥಿನಿಯರು ತರಗತಿಗೆ ಹಾಜರಾಗುತ್ತಿದ್ದಾರೆ’ ಎಂದು ಉಪ್ಪಿನಂಗಡಿ ಗ್ರಾಮ ಪಂಚಾಯಿತಿ ಸದಸ್ಯ ಅಬ್ದುಲ್‌ ರಶೀದ್‌ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT