ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್‌ ವಿಚಾರಣೆ ನಾಳೆಗೆ: ಶಾಂತಿ ಕಾಪಾಡಲು ವಿದ್ಯಾರ್ಥಿಗಳಿಗೆ ಕೋರ್ಟ್‌ ಮನವಿ

Last Updated 8 ಫೆಬ್ರುವರಿ 2022, 12:30 IST
ಅಕ್ಷರ ಗಾತ್ರ

ಬೆಂಗಳೂರು: ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಹಾಜರಾಗುವುದನ್ನು ಪ್ರತಿಬಂಧಿಸಿ ಉಡುಪಿಯ ಸರ್ಕಾರಿ ಬಾಲಕಿಯರ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿ ಹೊರಡಿಸಿರುವ ಆದೇಶ ಸೇರಿದಂತೆ ಹಿಜಾಬ್ ಕುರಿತಾದ ಎಲ್ಲ ರಿಟ್ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್‌ ಬುಧವಾರಕ್ಕೆ ಮುಂದೂಡಿದೆ.

ನಾಳೆ ಮಧ್ಯಾಹ್ನ 2.30ಕ್ಕೆ ವಿಚಾರಣೆ ಆರಂಭವಾಗಲಿದೆ. ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಏಕಸದಸ್ಯ ನ್ಯಾಯಪೀಠ ಅರ್ಜಿಗಳ ವಿಚಾರಣೆ ನಡೆಸುತ್ತಿದೆ.

‘ಪ್ರತಿಭಟನೆ ಮಾಡುವುದು, ಬೀದಿಗಿಳಿಯುವುದು, ಘೋಷಣೆ ಕೂಗುವುದು, ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸುವುದು, ವಿದ್ಯಾರ್ಥಿಗಳು ಇತರರ ಮೇಲೆ ಹಲ್ಲೆ ನಡೆಸುವುದು ಒಳ್ಳೆಯದಲ್ಲ. ವಿದ್ಯಾರ್ಥಿಗಳು ಶಾಂತಿ ಕಾಪಾಡಬೇಕು’ ಎಂದು ಕೋರ್ಟ್‌ ಮನವಿ ಮಾಡಿತು.

‘ಸಾರ್ವಜನಿಕರ ಪ್ರಜ್ಞಾವಂತಿಕೆ ಮತ್ತು ಸಚ್ಚಾರಿತ್ರ್ಯದ ಮೇಲೆ ಕೋರ್ಟ್‌ಗೆ ಸಂಪೂರ್ಣ ನಂಬಿಕೆ ಇದೆ. ಜನ ಅದನ್ನು ಪಾಲಿಸುತ್ತಾರೆ ಎಂದು ಕೋರ್ಟ್‌ ಆಶಿಸುತ್ತದೆ’ ಎಂದು ಪೀಠ ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT