ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಸೀದಿ ಮೇಲೆ ಭಗವಾಧ್ವಜ ಹಾರಾಟ: ಹಿಂದೂ–ಮುಸ್ಲಿಂ ಮುಖಂಡರ ಸಮ್ಮುಖದಲ್ಲಿ ಸುಖಾಂತ್ಯ

Last Updated 12 ಮೇ 2022, 3:01 IST
ಅಕ್ಷರ ಗಾತ್ರ

ಮೂಡಲಗಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಅರಭಾವಿಯ ಸತ್ತಿಗೇರಿ ಗಡ್ಡೆ ಸಮುದಾಯದ ಮಸೀದಿ ಮೇಲೆ ಕಿಡಿಗೇಡಿಗಳು ಕಟ್ಟಿದ್ದ ಭಗವಾಧ್ವಜವನ್ನು ಹಿಂದೂ ಹಾಗೂ ಮುಸ್ಲಿಂ ಸಮುದಾಯದ ಹಿರಿಯರ ಸಮ್ಮುಖದಲ್ಲಿ ಪೊಲೀಸರು ಬುಧವಾರ ಬೆಳಿಗ್ಗೆ
ಕೆಳಕ್ಕಿಳಿಸಿದ್ದಾರೆ.

ಮಂಗಳವಾರ ಮಧ್ಯರಾತ್ರಿ ಇಲ್ಲವೇ ಬೆಳಗಿನ ಜಾವದಲ್ಲಿ ಕಿಡಿಗೇಡಿಗಳು ಧ್ವಜವನ್ನು ಕಟ್ಟಿರಬಹುದು ಎಂದು ಶಂಕಿಸಲಾಗಿದೆ. ನಸುಕಿನಲ್ಲಿ ಮುಸ್ಲಿಂ ಸಮಾಜದವರು ಪ್ರಾರ್ಥನೆಗೆ ಹೋದಾಗ ಧ್ವಜ ಕಟ್ಟಿದ್ದು ಕಂಡುಬಂದಿದೆ.

‘ಗ್ರಾಮದಲ್ಲಿ ಹಿಂದೂ ಹಾಗೂ ಮುಸ್ಲಿಮರು ಸಾಮರಸ್ಯದಿಂದ ಬಾಳು ತ್ತಿದ್ದು, ಜನರಲ್ಲಿ ಒಡಕು ಮೂಡಿಸುವ ಉದ್ದೇಶದಿಂದ ಈ ಕೃತ್ಯ ಮಾಡಲಾಗಿದೆ. ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಪೊಲೀಸರು ಪ್ರಕರಣ ದಾಖಲಿಸಬೇಕು’ ಎಂದು ಎರಡೂ ಸಮುದಾಯ ಮುಖಂಡರು ಪ್ರಕರಣ ದಾಖಲಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT