ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋಮು ಗಲಾಟೆ: ಕಠಿಣ ಕ್ರಮಕ್ಕೆ ಡಿಜಿಪಿ ಪ್ರವೀಣ್ ಸೂದ್ ಸೂಚನೆ

Last Updated 11 ಏಪ್ರಿಲ್ 2022, 18:28 IST
ಅಕ್ಷರ ಗಾತ್ರ

ಬೆಂಗಳೂರು: ‘ಧರ್ಮದ ವಿಚಾರದಲ್ಲಿ ಕೋಮು ಗಲಾಟೆಗಳು ನಡೆದರೆ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

‘ಹಿಂಸೆಗೆ ಇಳಿದರೆ ಕ್ರಮ ನಿಶ್ಚಿತ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ,ರಾಜ್ಯದ ಕಮಿಷನರ್‌ಗಳು, ಐಜಿಪಿಗಳು ಹಾಗೂ ಎಲ್ಲ ಜಿಲ್ಲೆಗಳ ಎಸ್ಪಿ ಜೊತೆ ಸೋಮವಾರ ವಿಡಿಯೊ ಕಾನ್ಫರೆನ್ಸ್ ನಡೆಸಿದ ಪ್ರವೀಣ್ ಸೂದ್, ‘ಕೋಮು ವಿಚಾರವಾಗಿ ಗಲಾಟೆಗಳು ನಡೆದು, ಕಾನೂನು ಸುವ್ಯವಸ್ಥೆಗೆ ಧಕ್ಕೆಯಾದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು’ ಎಂದು ಎಚ್ಚರಿಸಿದ್ದಾರೆ.

‘ಧರ್ಮದ ವಿಚಾರದಲ್ಲಿ ಸಂಘರ್ಷಗಳು ಆಗದಂತೆ ನೋಡಿಕೊಳ್ಳಬೇಕು. ಯಾವುದೇ ಅಹಿತಕರ ಘಟನೆಗೆ ಆಸ್ಪದ ನೀಡಬಾರದು’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT