ಗುರುವಾರ , ಅಕ್ಟೋಬರ್ 1, 2020
27 °C

ಹಿರಿಯೂರು ಬಳಿ ಬಸ್‌ಗೆ ಬೆಂಕಿ: ಮೂವರು ಮಕ್ಕಳು, ಇಬ್ಬರು ಮಹಿಳೆಯರ ಗುರುತು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಯಪುರ: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನಲ್ಲಿ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ರಾತ್ರಿ  ಬೆಂಕಿ ಹೊತ್ತಿ ಉರಿದ ಬಸ್‌ನಲ್ಲಿ ವಿಜಯಪುರದ ಮೂವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಐವರು ಸಾವಿಗೀಡಾಗಿರುವುದಾಗಿ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. 

ಶೀಲಾ ರವಿ(33), ಸ್ಪರ್ಷಾ(8),  ಸಮೃದ್ಧ (5), ಕವಿತಾ ವಿನಾಯಕ (29) ಮತ್ತು ನಿಶ್ಚಿತಾ(3) ಬೆಂಕಿಗೆ ಆಹುತಿಯಾಗಿದ್ದಾರೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನುಪಮ್ ಅಗರವಾಲ್ ತಿಳಿಸಿದ್ದಾರೆ. 

ನಿನ್ನೆ ರಾತ್ರಿ 9 ಗಂಟೆಗೆ ಕುಕ್ಕೆ ಶ್ರೀ ಬಸ್ ವಿಜಯಪುರದಿಂದ ಹೊರಟಿತ್ತು. 29 ಪ್ರಯಾಣಿಕರು, ಇಬ್ಬರು ಚಾಲಕರು ಇದ್ದರು ಎಂದು ಟೆಕೆಟ್ ಬುಕ್ಕಿಂಗ್ ಏಜನ್ಸಿಯವರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು