ಭಾನುವಾರ, ನವೆಂಬರ್ 29, 2020
25 °C

ಭಾರತ ಇತಿಹಾಸ ಅಧ್ಯಯನ ಸಮಿತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಿ: ಟಿ.ಎಸ್. ನಾಗಾಭರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭಾರತದ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅಧ್ಯಯನ ನಡೆಸಲು ರಚಿಸಿರುವ ತಜ್ಞರ ಸಮಿತಿಯಲ್ಲಿ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್. ನಾಗಾಭರಣ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೇಂದ್ರ ಸರ್ಕಾರ ರಚಿಸಿದ ಸಮಿತಿಯಲ್ಲಿ 16 ಸದಸ್ಯರಿದ್ದಾರೆ. ದೇಶದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಸಮಿತಿ ಅಧ್ಯಯನ ನಡೆಸಲಿದೆ. ಈ ಸಮಿತಿಯಲ್ಲಿ ದಕ್ಷಿಣ ಭಾರತೀಯರಿಗೆ ಸ್ಥಾನ ನೀಡಿಲ್ಲ. ಹೀಗಾಗಿ ಈ ಸಂಬಂಧ ಅವರು ಸಂಸ್ಕೃತಿ ಸಚಿವಾಲಯಕ್ಕೆ ಪತ್ರ ಬರೆದಿದ್ದು, ‘ಕರ್ನಾಟಕವು ಅತ್ಯಂತ ಶ್ರೀಮಂತ ಕಲೆ, ಸಂಸ್ಕೃತಿ ಹಾಗೂ ಇತಿಹಾಸ ಹೊಂದಿದೆ. ಮೌರ್ಯರು, ಚಾಲುಕ್ಯರು, ಹೊಯ್ಸಳರು ಸೇರಿದಂತೆ ಹಲವು ರಾಜಮನೆತನಗಳು ಆಳ್ವಿಕೆ ನಡೆಸಿವೆ. ಭಾಷಾ ವೈವಿಧ್ಯವನ್ನೂ ಇಲ್ಲಿ ಕಾಣಬಹುದಾಗಿದ್ದು, ಕರ್ನಾಟಕಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು