ಮಂಗಳವಾರ, ಆಗಸ್ಟ್ 16, 2022
28 °C

‘ಮಲೆನಾಡು ಕರ್ನಾಟಕ’ ಘೋಷಣೆಗೆ ಒತ್ತಾಯ: ಎಚ್‌.ಕೆ.ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕದಂತೆ ಮಲೆನಾಡಿನ ಜಿಲ್ಲೆಗಳನ್ನು ಸೇರಿಸಿ ಮಲೆನಾಡು ಕರ್ನಾಟಕ ಎಂದು ಘೋಷಿಸಿ ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ನೀಡಬೇಕು ಎಂದು ಜೆಡಿಎಸ್‌ನ ಎಚ್‌.ಕೆ.ಕುಮಾರಸ್ವಾಮಿ ಒತ್ತಾಯಿಸಿದರು.

ವಿಧಾನಸಭೆಯಲ್ಲಿ ಶುಕ್ರವಾರ, ವಿವಿಧ ಇಲಾಖೆಗಳ ಅನುದಾನಗಳ ಬೇಡಿಕೆಯ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ರಾಜ್ಯದ ಇತರ ಭಾಗಗಳ ಅಭಿವೃದ್ಧಿಗೆ ಒತ್ತು ನೀಡಿರುವುದನ್ನು ಸ್ವಾಗತಿಸುತ್ತೇನೆ. ನಮ್ಮ ಭಾಗದಲ್ಲಿ ಅತಿ ಹೆಚ್ಚು ಮಳೆ ಆಗುವುದರಿಂದ ಪ್ರತಿ ವರ್ಷವೂ ರಸ್ತೆಗಳು ಹಾಳಾಗುತ್ತಿವೆ. ಇದಲ್ಲದೇ ಇನ್ನೂ ಅನೇಕ ಕ್ಷೇತ್ರಗಳಲ್ಲಿ ಅಭಿವೃದ್ಧಿ ಆಗಬೇಕಾಗಿದೆ’ ಎಂದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು