ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ.15ರವರೆಗೆ ಸಿಇಟಿ ಕೌನ್ಸೆಲಿಂಗ್‌ಗೆ ಕಾಲಾವಕಾಶ: ಎಐಸಿಟಿಇಗೆ ಪತ್ರ

Last Updated 30 ಡಿಸೆಂಬರ್ 2020, 21:30 IST
ಅಕ್ಷರ ಗಾತ್ರ

ಬೆಂಗಳೂರು: ವೃತ್ತಿಪರ ಕೋರ್ಸ್‌ಗಳ ಖಾಲಿ ಇರುವ ಸೀಟುಗಳಿಗೆ ಪ್ರವೇಶಕ್ಕೆ ಮತ್ತೊಂದು ಸುತ್ತಿನ ಕೌನ್ಸೆಲಿಂಗ್ ಅಗತ್ಯವಿದ್ದು, ಜ. 15ರವರೆಗೆ ಕಾಲಾವಕಾಶ ನೀಡುವಂತೆ ಕೋರಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧ್ಯಕ್ಷರಿಗೆ ಉನ್ನತ ಶಿಕ್ಷಣ ಇಲಾಖೆ ಪತ್ರ ಬರೆದಿದೆ.

ಉಳಿದಿರುವ ವೃತ್ತಿಪರ ಸೀಟ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತೊಂದು ಬಾರಿ, ಕೊನೆಯದಾಗಿ ಅವಕಾಶ ನೀಡುವಂತೆ ವಿದ್ಯಾರ್ಥಿಗಳು ಮನವಿ ಮಾಡಿದ್ದಾರೆ. ಜೊತೆಗೆ, ಕರ್ನಾಟಕ ಅನುದಾನರಹಿತ ಖಾಸಗಿ ಶೈಕ್ಷಣಿಕ ಕಾಲೇಜುಗಳ ಸಂಸ್ಥೆ (ಕೆಯುಪಿಇಸಿಎ) ಕೂಡ ಎಂಜಿನಿಯರಿಂಗ್ ಮತ್ತು ಆರ್ಕಿಟೆಕ್ಚರ್ ಕೋರ್ಸ್‌ಗಳಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಜ. 15ರವರೆಗೆ ಕಾಲಾವಕಾಶ ವಿಸ್ತರಿಸಲು ಕೋರಿದೆ. ಈ ಅಂಶಗಳನ್ನು ಗಮನದಲ್ಲಿರಿಸಿಕೊಂಡು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪತ್ರ ಬರೆಯಲಾಗಿದೆ ಎಂದುಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಈ ಹಿಂದಿನ ಅನುಮತಿಯ ಪ್ರಕಾರ ವೃತ್ತಿಪರ ಕೋರ್ಸ್‌ಗೆ ಪ್ರವೇಶ ಪಡೆಯಲು ಡಿ. 31 ಕೊನೆಯ ದಿನವಾಗಿದೆ. ಆದರೆ, ಯುಜಿ ಸಿಇಟಿ ಮಾಪ್ ಅಪ್ ಸುತ್ತಿನಲ್ಲಿ ಎಂಜಿನಿಯರಿಂಗ್ ಸೀಟು ಪಡೆದಿದ್ದ ಕೆಲವು ವಿದ್ಯಾರ್ಥಿಗಳು, ಸೀಟು ಹಿಂಪಡೆದು ಶುಲ್ಕ ಮರುಪಾವತಿಸುವಂತೆ ಆಗ್ರಹಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮುಂದೆ ಸೋಮವಾರ ಪೋಷಕರೊಂದಿಗೆ ಪ್ರತಿಭಟನೆ ನಡೆಸಿದ್ದರು.

‘ಎಂಜಿನಿಯರಿಂಗ್ ಬದಲು ಆಯುಷ್, ಬಿ.ಎಸ್ಸಿ., ಬಿ.ಕಾಂ. ಅಥವಾ ಇನ್ನಿತರ ಕೋರ್ಸ್‌ಗಳನ್ನು ಓದಲು ಇಚ್ಛಿಸುತ್ತೇವೆ. ಆಯುಷ್ ಕೋರ್ಸ್‌ಗಳಿಗೆ ಇನ್ನೂ ಕೌನ್ಸೆಲಿಂಗ್ ನಡೆಸಿಲ್ಲ. ಆದ್ದರಿಂದ, ಎಂಜಿನಿಯರಿಂಗ್ ಸೀಟು ಹಿಂದಕ್ಕೆ ಪಡೆಯಲು ಅನುಕೂಲವಾಗುತ್ತದೆ’ ಎಂದೂ ವಿದ್ಯಾರ್ಥಿಗಳು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT