ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

HMES: 3 ಜಿಲ್ಲಾ ಆಸ್ಪತ್ರೆಗಳಿಗೆ ‘ಇ–ಆಸ್ಪತ್ರೆ’- ಕ್ಯಾಬಿನೆಟ್ ಮೀಟಿಂಗ್ ಹೈಲೈಟ್ಸ್

Last Updated 12 ಮಾರ್ಚ್ 2022, 1:47 IST
ಅಕ್ಷರ ಗಾತ್ರ

ಬೆಂಗಳೂರು: ಆರೋಗ್ಯ ನಿರ್ವಹಣಾ ಮಾಹಿತಿ ವ್ಯವಸ್ಥೆ ಅನುಷ್ಠಾನಕ್ಕಾಗಿ ಇ–ಆಸ್ಪತ್ರೆ (ಎಚ್‌ಎಂಐಎಸ್) ತಂತ್ರಾಂಶವನ್ನು ಜಿಲ್ಲಾ ಮಟ್ಟದ 3 ಆಸ್ಪತ್ರೆಗಳು ಮತ್ತು 157 ಸಮುದಾಯ ಆರೋಗ್ಯ ಕೆಂದ್ರಗಳಲ್ಲಿ ಅಳವಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಇದರ ಅನುಷ್ಠಾನಕ್ಕೆ ಅಗತ್ಯವಿರುವ ಐಸಿಟಿ ಸಲಕರಣೆಗಳು ಮತ್ತು 9 ಜಿಲ್ಲಾ ಆಸ್ಪತ್ರೆಗಳು ಹಾಗೂ 143 ತಾಲ್ಲೂಕು ಆಸ್ಪತ್ರೆಗಳಿಗೆ 701 ಡೆಸ್ಕ್‌ ಟಾಪ್‌ ಕಂಪ್ಯೂಟರ್‌ಗಳನ್ನು ಒಟ್ಟು ₹28.55 ಕೋಟಿ ವೆಚ್ಚದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ.

ಎಚ್‌ಎಂಐಎಸ್ ಆರೋಗ್ಯ ಸೌಲಭ್ಯಗಳು ಮತ್ತು ಆರೋಗ್ಯ ಸಂಸ್ಥೆಗಳಲ್ಲಿನ ನಿರ್ವಹಣೆ ಮತ್ತು ನಿರ್ಧಾರ ತೆಗೆದುಕೊಳ್ಳಲು ಸಹಕಾರ ನೀಡುವ ನಿರ್ದಿಷ್ಟವಾಗಿ ವಿನ್ಯಾಸಗೊಳಿಸಿದ ದತ್ತಾಂಶ ಸಂಗ್ರಹಣಾ ವ್ಯವಸ್ಥೆ.

ಪ್ರಮುಖ ನಿರ್ಧಾರಗಳು

* ಹಾವೇರಿ ಜಿಲ್ಲೆ ಶಿಗ್ಗಾವಿ ತಾಲ್ಲೂಕಿನ 100 ಹಾಸಿಗೆಗಳ ಸಾರ್ವಜನಿಕ ಆಸ್ಪತ್ರೆಯನ್ನು 250 ಹಾಸಿಗೆಗಳ ಸಾಮರ್ಥ್ಯಕ್ಕೆ ಮೇಲ್ದರ್ಜೆಗೇರಿಸಲಾಗುವುದು. ಆಸ್ಪತ್ರೆಗಳ ಕಟ್ಟಡ ನಿರ್ಮಾಣ, ಶವಾಗಾರ ಮತ್ತು ಸಿಬ್ಬಂದಿ ವಸತಿ ಗೃಹಗಳ ನಿರ್ಮಾಣ ಕಾಮಗಾರಿಗೆ ₹120 ಕೋಟಿ

* ಬೆಳಗಾವಿ ಜಿಲ್ಲೆಯ ಬೈಲಹೊಂಗಲ, ಕಲಬುರಗಿ ಜಿಲ್ಲೆಯ ಜೇವರ್ಗಿ ಹಾಗೂ ಕೊಪ್ಪಳ ಜಿಲ್ಲೆಯ ಕುಷ್ಠಗಿ
ಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿಯಲ್ಲಿ ಸಾರ್ವಜನಿಕ ಆಸ್ಪತ್ರೆಯ ಜತೆಗೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕಾಗಿ ₹96.10 ಕೋಟಿ

* ಕಲಬುರಗಿ ಜಿಲ್ಲೆ ಆಳಂದ ತಾಲ್ಲೂಕಿನ ಕೋತ್ತನಹಿಪ್ಪರಗಾ ಗ್ರಾಮದ ಬಳಿ ಸಣ್ಣ ನೀರಾವರಿ ಹೊಸಕೆರೆ ನಿರ್ಮಾಣ ಕಾಮಗಾರಿಗಾಗಿ ₹14ಕೋಟಿ, ಇದೇ ತಾಲ್ಲೂಕಿನಕವಲಗಾ ಗ್ರಾಮದ ಬಳಿ ಹೊಸ ಕೆರೆ ನಿರ್ಮಾಣಕ್ಕಾಗಿ ₹16 ಕೋಟಿ

* ಕೊಪ್ಪಳ ತಾಲ್ಲೂಕಿನ ಮಾದನೂರು ಮತ್ತು ದೇವಲಾಪೂರ ನಡುವೆ ಹರಿಯುವ ಹಿರೇಹಳ್ಳಕ್ಕೆ ಬ್ಯಾರೇಜ್‌ ಕಂ ಬ್ರಿಡ್ಜ್‌ ನಿರ್ಮಾಣ ಕಾಮಗಾರಿಗೆ ಪರಿಷ್ಕೃತ ಅಂದಾಜು ₹12.36 ಕೋಟಿ

* ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲ್ಲೂಕಿನ ಉಳುವರೆ ಮತ್ತು ಸಡಗೇರಿವರೆಗೆ ಖಾರ್‌ ಲ್ಯಾಂಡ್‌ ನಿರ್ಮಾಣ ಕಾಮಗಾರಿಗೆ ₹13 ಕೋಟಿ , ಕಾರವಾರ ತಾಲ್ಲೂಕಿನ ಕಣಸಗಿರಿ ಬಳಿ ಖಾರ್‌ಲ್ಯಾಂಡ್‌ ಬಂಡ್‌ ನಿರ್ಮಾಣ ಕಾಮಗಾರಿಗೆ ₹12 ಕೋಟಿ ಮತ್ತು ಕುಮಟಾ ತಾಲ್ಲೂಕಿನ ಬೆಟ್ಟುಳಿ ಪಡುವನಿ ಹತ್ತಿರ ಖಾರ್‌ಲ್ಯಾಂಡ್‌ ನಿರ್ಮಾಣ ಕಾಮಗಾರಿಗೆ ₹19 ಕೋಟಿ

*ಬೆಂಗಳೂರು ದಕ್ಷಿಣ ತಾಲ್ಲೂಕು ಕೆಂಗೇರಿ ಹೋಬಳಿ, ಭೀಮನಕುಪ್ಪೆ ಗ್ರಾಮದಲ್ಲಿ ರಾಜೀವ್‌ಗಾಂಧಿ ಸಾರ್ವ
ಜನಿಕ ಆರೋಗ್ಯ ಸಂಸ್ಥೆ ಮತ್ತು ರೋಗ ನಿಯಂತ್ರಣ ಕೇಂದ್ರ, ಸುಧಾರಿತ ಸಂಶೋಧನಾ ಕೇಂದ್ರ ಮತ್ತು ವಿದ್ಯಾರ್ಥಿ ನಿಲಯಗಳ ಕಟ್ಟಡಗಳ ನಿರ್ಮಾಣಕ್ಕೆ ₹200 ಕೋಟಿ

* ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲ್ಲೂಕಿನ ಮಂಚೇನಹಳ್ಳಿ ಮತ್ತು ಇತರೆ 41 ಗ್ರಾಮಗಳ ಮೊದಲ ಹಂತದಲ್ಲಿ ಜಲಜೀವನ್‌ ಮಿಷನ್‌ ಯೋಜನೆ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ₹44 ಕೋಟಿ

* ಚಿಕ್ಕಮಗಳೂರು ಜಿಲ್ಲಾ ಕಚೇರಿ ಸಂಕೀರ್ಣ ಕಟ್ಟಡ ₹30 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಅನುಮೋದನೆ

* ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಅವರಾದಿ ಮತ್ತು ಇತರ 115 ಗ್ರಾಮಗಳಿಗೆ ಮತ್ತು ಸವದತ್ತಿ ತಾಲ್ಲೂಕಿನ 17 ಗ್ರಾಮಗಳಿಗೆ ಜಲಜೀವನ್ ಮಿಷನ್ ಯೋಜನೆ ₹340 ಕೋಟಿ ವೆಚ್ಚದಲ್ಲಿ ಜಾರಿ

* ಗದಗ ಜಿಲ್ಲೆಯ ಶಿರಹಟ್ಟಿ ಮತ್ತು ಮುಂಡರಗಿ ತಾಲ್ಲೂಕಿನ 29 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರನ್ನು ತುಂಬಿಸುವ ಜಾಲವಾಡಗಿ ಏತ ನೀರಾವರಿ ಯೋಜನೆಯ ₹197.50 ಕೋಟಿ ಡಿಪಿಆರ್‌ಗೆ ಒಪ್ಪಿಗೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT