ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಳಿ ಮಾಡುವ ದುರ್ಗತಿ ಕಾಂಗ್ರೆಸ್‍ಗೆ ಬರಬಾರದಿತ್ತು: ಗೃಹ ಸಚಿವ ಆರಗ ಜ್ಞಾನೇಂದ್ರ

Last Updated 1 ಜೂನ್ 2022, 15:36 IST
ಅಕ್ಷರ ಗಾತ್ರ

ತಿಪಟೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಯ ಮೇಲೆ ದಾಳಿ ಮಾಡುವಂತಹ ದುರ್ಗತಿ ಕಾಂಗ್ರೆಸ್ ಗೆ ಬರಬಾರದಿತ್ತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಇಲ್ಲಿ ಬುಧವಾರ ಹೇಳಿದರು.

ಸಚಿವ ಬಿ.ಸಿ.ನಾಗೇಶ್ ಮನೆಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವರ ಮನೆಯ ಮೇಲೆ ದಾಳಿ ಮಾಡಿದ ಕೃತ್ಯ ನಿಜಕ್ಕೂ ಖಂಡನೀಯ. ದಾಳಿ ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದರು.

ಸಚಿವರ ಮನೆಗೆ ಬೆಂಕಿ ಹಚ್ಚಲು ಪ್ರಯತ್ನಿಸಿ ಭಯದ ವಾತಾವರಣವನ್ನು ಸೃಷ್ಟಿಸಿದ್ದಾರೆ. ಘಟನೆಯಲ್ಲಿ ಭಾಗಿಯಾದ 15 ಜನ ಯುವಕರು ಮತ್ತು ಎರಡು ವಾಹನಗಳನ್ನು ಈಗಾಗಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರತಿಭಟನೆಗೆ ಬಂದಿರುವವರು ಯಾರೂ ಸಹ ಸ್ಥಳೀಯರಲ್ಲ. ದಾವಣಗೆರೆ, ಶಿವಮೊಗ್ಗ, ಭದ್ರಾವತಿ, ಬೆಂಗಳೂರು, ಹಾಸನ, ಮಂಗಳೂರಿನವರು. ಬಹಳ ವ್ಯವಸ್ಥಿತವಾಗಿ ಬಂದಿರುವುದನ್ನು ನೋಡಿದರೆ ನಾಗೇಶ್ ಪ್ರಾಣ ತೆಗೆಯುತ್ತಿದ್ದರೆನೋ ಎನ್ನುವಂತಿದೆ. ಸಚಿವರ ಮನೆಗೆ, ಸಚಿವರಿಗೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ತಿಳಿಸಿದರು.

ಮನೆಯಲ್ಲಿ ಎಲ್ಲಿ ಬೆಂಕಿ ಹಚ್ಚಲಾಗಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಟ್ಟೆಗೆ ಬೆಂಕಿ ಹಚ್ಚಿದ್ದಾರೆ, ಹಾಗೆ ಬಿಟ್ಟಿದ್ದರೆ ಮನೆಗೂ ಹಚ್ಚುತ್ತಿದ್ದರು‌ ಎಂದರು.

ಮನೆಯಲ್ಲಿ ಬೆಂಕಿ ಹಚ್ಚಿದ ಸ್ಥಳವನ್ನು ತೋರಿಸಲಿಲ್ಲ. ಬದಲಿಗೆ ನಮ್ಮ ಬಳಿ ಫೋಟೋ ಇವೆ ಅವುಗಳನ್ನು ನಂತರ ಮಾಧ್ಯಮಗಳಿಗೆ ನೀಡಲಾಗುವುದು ಎಂದಷ್ಟೇ ಹೇಳಿದರು.

ಪ್ರತಿಭಟನಾಕಾರರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ಮಾಡಿರುವ ಬಗ್ಗೆ ಮಾಹಿತಿ ಇಲ್ಲ. ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಕೈಗೊಳ್ಳುತ್ತಾರೆ ಎಂದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT