ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಪಿನ್‌ ರಾವತ್‌ ಅವಹೇಳನ: ಕಠಿಣ ಕ್ರಮಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ನಿರ್ದೇಶನ

Last Updated 11 ಡಿಸೆಂಬರ್ 2021, 6:53 IST
ಅಕ್ಷರ ಗಾತ್ರ

ಬೆಂಗಳೂರು: ಸೇನಾಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಸಾವಿನ ಕುರಿತು ಸಾಮಾಜಿಕ ಮಾಧ್ಯಮಗಳಲ್ಲಿ ಅವಹೇಳನಕಾರಿ ಬರಹಗಳು, ಪೋಸ್ಟ್‌ಗಳನ್ನು ಪ್ರಕಟಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ರಾಜ್ಯ ಪೊಲೀಸ್‌ ಮಹಾನಿರ್ದೇಶಕರಿಗೆ ನಿರ್ದೇಶನ ನೀಡಿದ್ದಾರೆ.

ದೇಶದ ಹೆಮ್ಮೆಯ ಸೇನಾನಿಯಾದ ಬಿಪಿನ್‌ ರಾವತ್‌ ಅವರ ಸಾವನ್ನು ಸಂಭ್ರಮಿಸುವಂತಹ ಬರಹಗಳನ್ನು ಕೆಲವು ದುಷ್ಕರ್ಮಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯಬಿಡುತ್ತಿದ್ದಾರೆ. ಇಂತಹ ದೇಶವಿರೋಧಿಗಳನ್ನು ಪತ್ತೆಹಚ್ಚಿ, ತಕ್ಕ ಶಿಕ್ಷೆ ವಿಧಿಸಬೇಕಿದೆ. ಈ ರೀತಿಯ ವಿಕೃತ ಮನಸ್ಸಿನವರನ್ನು ವಿಳಂಬ ಮಾಡದೆ ಪತ್ತೆಹಚ್ಚಿ, ಕ್ರಮ ಜರುಗಿಸುವಂತೆ ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್‌ ಸೂದ್‌ ಅವರಿಗೆ ನಿರ್ದೇಶನ ನೀಡಲಾಗಿದೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ರಾವತ್‌ ಸಾವು ದೇಶಕ್ಕೆ ಭರಿಸಲಾಗದ ನಷ್ಟ. ಅವರು ದೇಶಕ್ಕೆ ಸಲ್ಲಿಸಿರುವ ಸೇವೆಯು ಅಸಾಧಾರಣವಾದುದು. ಅಂತವಹರ ಬಗ್ಗೆ ವಿಕೃತವಾಗಿ ಪೋಸ್ಟ್‌ಗಳನ್ನು ಹಾಕುವುದನ್ನು ಸಹಿಸುವುದಿಲ್ಲ. ಈ ಬಗ್ಗೆ ಪೊಲೀಸ್‌ ಮಹಾನಿರ್ದೇಶಕರ ಜತೆ ಶನಿವಾರ ಬೆಳಿಗ್ಗೆ ಚರ್ಚೆ ನಡೆಸಿದ್ದೇನೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT