ಭಾನುವಾರ, ಜೂನ್ 13, 2021
29 °C
ಕೊರೊನಾ ವಾರಿಯರ್ಸ್, ಸೋಂಕಿತರಿಗೆ ಹೋಳಿಗೆ ಊಟ ಉಣಬಡಿಸಿದ ರೇಣುಕಾಚಾರ್ಯ

ಸೋಂಕಿತರಿಗೆ ಹೋಳಿಗೆ ಊಟ ಬಡಿಸಿದ ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊನ್ನಾಳಿ: ‘ಕೋವಿಡ್ ಸೋಂಕಿತರ ನೋವಿನಲ್ಲಿ ಭಾಗಿಯಾಗುವುದು ನನ್ನ ಕರ್ತವ್ಯ. ಹೀಗಾಗಿ ಬಸವ ಜಯಂತಿ ಅಂಗವಾಗಿ ಸೋಂಕಿತರಿಗೂ ಹೋಳಿಗೆ ಊಟ ನೀಡುವ ಮೂಲಕ ಅವರ ನೋವಿನಲ್ಲಿ ಭಾಗಿಯಾಗಿದ್ದೇವೆ’ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ಕೋವಿಡ್ ಸೋಂಕಿತರು, ನ್ಯಾಮತಿ ತಾಲ್ಲೂಕಿನ ಮಾದನಬಾವಿಯ ಕೋವಿಡ್ ಕೇರ್ ಸೆಂಟರ್‌ನಲ್ಲಿರುವ ಸೋಂಕಿತರು, ಅವಳಿ ತಾಲ್ಲೂಕಿನ ಕರೊನಾ ವಾರಿಯರ್‌ಗಳು, ಪೊಲೀಸ್ ಸಿಬ್ಬಂದಿ, ವೈದ್ಯರು, ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿ, ಪೌರಕಾರ್ಮಿಕರು, ತಾಲ್ಲೂಕು ಆಡಳಿತ ಹಾಗೂ ಅವಳಿ ತಾಲ್ಲೂಕಿನ ಚೆಕ್ ಪೋಸ್ಟ್‌ನಲ್ಲಿರುವ ಎಲ್ಲಾ ಸಿಬ್ಬಂದಿಗೆ ತಮ್ಮ ಮನೆಯಲ್ಲಿಯೇ ತಯಾರಿಸಿದ ಹೋಳಿಗೆ ಊಟವನ್ನು ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ನೂರಾರು ಜನರಿಗೆ ಲಸಿಕೆ: ನಗರದ ಅಂಬೇಡ್ಕರ್ ಭವನದಲ್ಲಿರುವ ಲಸಿಕಾ ಕೇಂದ್ರಕ್ಕೆ ಭೇಟಿ ನೀಡಿದ ಶಾಸಕರು, 45 ವರ್ಷ ಮೇಲ್ಪಟ್ಟವರಿಗೆ ಎರಡನೇ ಹಂತದ ಕೋವಿಶೀಲ್ಡ್ ಹಾಗೂ ಕೋವ್ಯಾಕ್ಸಿನ್ ಲಸಿಕೆಯನ್ನು ಖುದ್ದು ನಿಂತು ಕೊಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು