ಗದಗ: ಗಾಂಧಿವಾದಿ, ಜಲಸಂರಕ್ಷಕ ಬೆಳಗಾವಿಯ ಶಿವಾಜಿ ಕಾಗಣಿಕರ್ ಹಾಗೂ ಸಾವಯವ ಕೃಷಿಕ, ಮೈಸೂರಿನ ಎ.ಪಿ.ಚಂದ್ರಶೇಖರ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ವಿಷ್ಣುಕಾಂತ ಎಸ್.ಚಟಪಲ್ಲಿ ತಿಳಿಸಿದ್ದಾರೆ.
ಶಿವಾಜಿ ಕಾಗಣಿಕರ್ ರಾತ್ರಿ ಶಾಲೆಗಳನ್ನು ಆರಂಭಿಸಿ, ಗ್ರಾಮೀಣ ಜನರಲ್ಲಿ ಶಿಕ್ಷಣ ಹಾಗೂ ಜಲ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿ ಸಿದ್ದಾರೆ. ಕೆರೆಗಳನ್ನು ನಿರ್ಮಿಸಿದ್ದಾರೆ.
ಮೈಸೂರಿನ ಎ.ಪಿ. ಚಂದ್ರಶೇಖರ್ 40 ವರ್ಷಗಳಿಂದ ಸಾವಯವ ಕೃಷಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಔಷಧೀಯ ಸಸ್ಯಗಳ ಪೋಷಣೆ ಮಾಡುತ್ತಿದ್ದಾರೆ.
ಮಾರ್ಚ್ 10ರಂದು ನಡೆಯುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವ
ವಿದ್ಯಾಲಯದ ಮೂರನೇ ಘಟಿಕೋತ್ಸವದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.