ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಪ್‌ಕಾಮ್ಸ್‌ ಆನ್‌ಲೈನ್ ಸೇವೆ ತಾತ್ಕಾಲಿಕ ಸ್ಥಗಿತ

Last Updated 25 ಏಪ್ರಿಲ್ 2022, 16:11 IST
ಅಕ್ಷರ ಗಾತ್ರ

ಬೆಂಗಳೂರು: ಗ್ರಾಹಕರ ಮನೆ ಬಾಗಿಲಿಗೆ ಉತ್ಪನ್ನಗಳನ್ನು ತಲುಪಿಸಲು ಹಾಪ್‌ಕಾಮ್ಸ್‌ ಆರಂಭಿಸಿದ್ದ ಆನ್‌ಲೈನ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ತಾಜಾ ಹಣ್ಣು, ತರಕಾರಿಗಳನ್ನು ಗ್ರಾಹಕರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದೊಂದಿಗೆ ಈ ಆನ್‌ಲೈನ್ ಸೇವೆಯನ್ನು 2021ರ ಸೆಪ್ಟೆಂಬರ್‌ನಲ್ಲಿ ಆರಂಭಿಸಲಾಗಿತ್ತು.

‘ಉತ್ಪನ್ನಗಳನ್ನು ತಲುಪಿಸಲು ಕೋಡ್ ಕೆಟಲಿಸ್ಟ್‌ ಎಂಬ ಸಂಸ್ಥೆಹಾಪ್‌ಕಾಮ್ಸ್‌ ಜತೆ ಕೈಜೋಡಿಸಿತ್ತು. ಆಡಳಿತಾತ್ಮಕ ಕಾರಣದಿಂದ ಈ ಸಂಸ್ಥೆಯ ಆನ್‌ಲೈನ್ ಸೇವೆಯನ್ನು ಸದ್ಯ ರದ್ದುಗೊಳಿಸಲಾಗಿದೆ. ಸಂಸ್ಥೆಯ ಗ್ರಾಹಕರು ಇದಕ್ಕೆ ಸಹಕರಿಸಬೇಕು’ ಎಂದು ಹಾಪ್‌ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಉಮೇಶ್‌ ಎಸ್.ಮಿರ್ಜಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT