ಹೊರನಾಡು, ಶೃಂಗೇರಿ: ಭಕ್ತರಿಗೆ ಪ್ರವೇಶ ನಿರ್ಬಂಧ
ಚಿಕ್ಕಮಗಳೂರು: ಕೋವಿಡ್‌ನಿಂದಾಗಿ ಇದೇ 21ರಿಂದ ಮೇ 4 ರವರೆಗೆ ಹೊರನಾಡಿನ ಅನ್ನಪೂರ್ಣೇಶ್ವರಿ ದೇಗುಲಕ್ಕೆ ಭಕ್ತರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ದೇವರ ದರ್ಶನ, ಪೂಜೆ, ಪ್ರಸಾದ ಮತ್ತು ವಸತಿ ಎಲ್ಲದಕ್ಕೂ ಭಕ್ತರಿಗೆ ನಿರ್ಬಂಧ ಹೇರಲಾಗಿದೆ. ದೇವಿ ಮಂಗಳಾರತಿಯ ನೇರಪ್ರಸಾರವನ್ನು 'ಯ್ಯೂ ಟ್ಯೂಬ್'ನಲ್ಲಿ ವೀಕ್ಷಿಸಬಹುದು ಎಂದು ಕ್ಷೇತ್ರದ ಧರ್ಮದರ್ಶಿ ಜಿ.ಭೀಮೇಶ್ವರ ಜೋಶಿ ತಿಳಿಸಿದ್ದಾರೆ.
ಶೃಂಗೇರಿ ಶಾರದಾ ಪೀಠದ ಎಲ್ಲ ದೇಗುಲಗಳಲ್ಲೂ ಭಕ್ತರ ಪ್ರವೇಶಕ್ಕೆ ಅನಿರ್ದಿಷ್ಟಾವಧಿಗೆ ನಿರ್ಬಂಧಿಸಲಾಗಿದೆ.
ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.