ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಿಂಪಲ್‌ ತಿಂಡಿ’ ಹೋಟೆಲ್‌ ಅನುಮತಿ ರದ್ದು: ಹೈಕೋರ್ಟ್‌ಗೆ ಹೇಳಿಕೆ

Last Updated 4 ಸೆಪ್ಟೆಂಬರ್ 2022, 22:26 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಕೆ.ಆರ್. ವೃತ್ತದಲ್ಲಿರುವ ಲೋಕೋಪಯೋಗಿ ಇಲಾಖೆ ಕಟ್ಟಡದ ಆವರಣದಲ್ಲಿ ‘ಸಿಂಪಲ್‌ ತಿಂಡಿ’ ಹೆಸರಿನ ಹೋಟೆಲ್ ಆರಂಭಿಸುವುದಕ್ಕೆ ನೀಡಲಾಗಿದ್ದ ಅನುಮತಿಯನ್ನು ಹಿಂಪಡೆಯಲಾಗಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

ಸಾಮಾಜಿಕ ಹೋರಾಟಗಾರ ಸಾಯಿ ದತ್ತಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು, ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಈಚೆಗೆ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲರು, ಕೆ.ಆರ್.ವೃತ್ತದಲ್ಲಿರುವ ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ) ಕಟ್ಟಡದ ಆವರಣದಲ್ಲಿನ ‘ಸಿಂಪಲ್ ತಿಂಡಿ’ ಹೆಸರಿನಲ್ಲಿ ಹೋಟೆಲ್‌ಗೆ ಅನುಮತಿ ನೀಡಲಾಗಿತ್ತು. ಆದರೆ, ಆವರಣದಲ್ಲಿ ಇಲಾಖೆಯ ವಿವಿಧ ಕಚೇಡರಿಗಳಿರುವ ಕಾರಣ ಜನದಟ್ಟಣೆ ಉಂಟಾಗಿ ವಾಹನಗಳ ನಿಲುಗಡೆಗೆ ತೊಂದರೆಯಾಗಲಿದೆ ಎಂಬ ಉದ್ದೇಶದಿಂದ ಅನುಮೋದನೆ ರದ್ದುಪಡಿಸಲಾಗಿದೆ’ ಎಂದು ತಿಳಿಸಿ ದರು.

ಏನಿದು ಪ್ರಕರಣ?: ಕೆ.ಆರ್. ವೃತ್ತದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿ ಆವರಣದಲ್ಲಿ ‘ಸಿಂಪಲ್ ತಿಂಡಿ‘ ಆರಂಭಿಸಲು ಅನುಮತಿ ನೀಡಲಾಗಿತ್ತು. ಇದನ್ನು ಪ್ರಶ್ನಿಸಿ ಸಾಯಿದತ್ತಾ ಕೋರ್ಟ್‌ ಮೆಟ್ಟಿಲೇರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT