ಮಂಗಳವಾರ, ಡಿಸೆಂಬರ್ 7, 2021
21 °C

ಮನೆ ಬಾಗಿಲು ಮುರಿದು ಕಳ್ಳತನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸೋಂಪುರ ಹೋಬಳಿಯ ಕಂಬಾಳು ಗ್ರಾಮದಲ್ಲಿ ನೆಲೆಸಿದ್ದ ಶಿಕ್ಷಕರೊಬ್ಬರ ಮನೆಯಲ್ಲಿ ಕಳವಾಗಿದ್ದು, ಈ ಸಂಬಂಧ ದಾಬಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಶಿಕ್ಷಕ ಜಡಿಯಪ್ಪ ಹಾಗೂ ಅವರ ಪತ್ನಿ ಮನೆಗೆ ಬೀಗ ಹಾಕಿಕೊಂಡು ದೊಡ್ಡಬಳ್ಳಾಪುರದಲ್ಲಿ ನೆಲೆಸಿರುವ ಮಗಳ ಮನೆಗೆ ಹೋಗಿದ್ದರು. ಈ ವೇಳೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿರುವ ಕಳ್ಳರು, ಬೀರುವಿನಲ್ಲಿ ಇಟ್ಟಿದ್ದ ₹2 ಲಕ್ಷ ನಗದು ಹಾಗೂ ₹3 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಬೆಳ್ಳಿಯ ಸಾಮಾಗ್ರಿಗಳನ್ನು ಕದ್ದು ಪರಾರಿಯಾಗಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಮಗಳ ಮನೆಯಿಂದ ಮರಳಿದ್ದ ಜಡಿಯಪ್ಪ ದಂಪತಿ ಬಾಗಿಲು ಒಡೆದಿರುವುದನ್ನು ಕಂಡು ಗಾಬರಿಯಾಗಿದೆ. ಒಳಗೆ ಹೋಗಿ ನೋಡಿದಾಗ ಬೀರುವಿನಲ್ಲಿ ಇಟ್ಟಿದ್ದ ನಗದು, ಚಿನ್ನಾಭರಣ ಹಾಗೂ ಬೆಳ್ಳಿಯ ಸಾಮಾಗ್ರಿಗಳು ಕಳವಾಗಿರುವುದು ಗೊತ್ತಾಗಿದೆ’ ಎಂದೂ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು