ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ+3 ವಿನ್ಯಾಸದಲ್ಲಿ ವಸತಿ ಯೋಜನೆ: ಸೋಮಣ್ಣ

Last Updated 24 ಮಾರ್ಚ್ 2021, 17:57 IST
ಅಕ್ಷರ ಗಾತ್ರ

ಬೆಂಗಳೂರು: ‘ಸರ್ಕಾರದ ವತಿಯಿಂದ ಇನ್ನು ಮುಂದೆ ಅತಿ ಎತ್ತರದ ಬಹುಮಹಡಿ ಕಟ್ಟಡ ನಿರ್ಮಾಣ ಮಾಡದೆ, 53 ಸಾವಿರ ಮನೆಗಳನ್ನು ಜಿ+3 ವಿನ್ಯಾಸದಲ್ಲಿ ನಿರ್ಮಾಣ ಮಾಡಲಾಗುವುದು’ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದರು.

ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ಸಿನ ಪಿ.ಆರ್. ರಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘2017ರಲ್ಲಿ 1 ಲಕ್ಷ ಬಹು ಮಹಡಿ ಬೆಂಗಳೂರು ವಸತಿ ಯೋಜನೆ ಘೋಷಿಸಲು ನಿರ್ಧರಿಸಲಾಯಿತು. ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒಂದು ಲಕ್ಷ ಮನೆಗಳನ್ನು ನೆಲಮಹಡಿ ಸಹಿತ ಮೂರು ಮಹಡಿ (ಜಿ+ 3) ಕಟ್ಟಡ ನಿರ್ಮಿಸಲು ರಾಜ್ಯ ಸರ್ಕಾರ ₹ 6 ಸಾವಿರ ಕೋಟಿಯ ಪ್ರಸ್ತಾವನೆ ಕೇಂದ್ರಕ್ಕೆ ಸಲ್ಲಿಸಿದ್ದು, ಕೇಂದ್ರ ತಾತ್ವಿಕ ಅನುಮೋದನೆ ನೀಡಿದೆ. ಅದರಂತೆ ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) ಅಡಿ ಕೇಂದ್ರದ ಸರ್ಕಾರ ಪ್ರತಿ ಮನೆಗೆ ತನ್ನ ಪಾಲಿನ ₹ 1.50 ಲಕ್ಷದಂತೆ ₹ 1,500 ಕೋಟಿಗೆ ಅನುಮೋದನೆ ನೀಡಿದೆ. ಅಲ್ಲದೆ, ಮೊದಲ ಕಂತಿನ ₹ 600 ಕೋಟಿ ಬಿಡುಗಡೆ ಮಾಡಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT