ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರ್ಗಿಮಹಾನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3ರಂದು ಮತದಾನ ನಡೆಯಲಿದೆ.

ಆ.16(ಸೋಮವಾರ)ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆ. 23(ಸೋಮವಾರ) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಆ.26(ಗುರುವಾರ) ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಸೆ.3(ಶುಕ್ರವಾರ) ರಂದು ಮತದಾನ ನಡೆಯಲಿದೆ.

ಮತಗಳ ಎಣಿಕೆಯು ಸೆ.6 (ಸೋಮವಾರ) ರಂದು ನಡೆಯಲಿದೆ.

ಬೆಳಗಾವಿಯ 58 ವಾರ್ಡ್‌ಗಳಿಗೆ, ಹುಬ್ಬಳ್ಳಿ-ಧಾರವಾಡದ 82 ವಾರ್ಡ್‌ಗಳಿಗೆ, ಕಲಬುರ್ಗಿಯ 55 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.