ಶನಿವಾರ, ಜೂನ್ 19, 2021
28 °C

‘ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸಲಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜ್ಯದಲ್ಲಿ ಆರೋಗ್ಯ ಪರಿಸ್ಥಿತಿ ಕುಸಿದಿದೆ. ಮಾನವ ಹಕ್ಕುಗಳಿಗೆ ಧಕ್ಕೆ ಎದುರಾಗಿ ಮಾರಣಹೋಮ ನಡೆಯುತ್ತಿದೆ. ಈ ಸಂದರ್ಭದಲ್ಲಿ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಿಸಿ, ಪರಿಸ್ಥಿತಿ ನಿಯಂತ್ರಿಸಬೇಕು’ ಎಂದು ಕರ್ನಾಟಕ ಬಲಿಜ ಜಾಗೃತಿ ವೇದಿಕೆಯ ಕಾರ್ಯದರ್ಶಿ ಜಿ.ಜ್ಞಾನೇಶ್‌ ಮನವಿ ಮಾಡಿದ್ದಾರೆ.

ಈ ಸಂಬಂಧ ಅವರು ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ’ಚಾಮರಾಜನಗರ ಜಿಲ್ಲೆಯಲ್ಲಿ ಆಮ್ಲಜನ ಸಿಗದೆ ರೋಗಿಗಳ ಮೃತಪಟ್ಟ ಘಟನೆ ದಾರುಣ. ಸರ್ಕಾರದ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ. ಕೋಲಾರದಲ್ಲೂ  ಇದೇ ರೀತಿ ರೋಗಿಗಳು ಮೃತಪಟ್ಟಿದ್ದು, ಇದಕ್ಕೆ ಸರ್ಕಾರವನ್ನೇ ಹೊಣೆ ಮಾಡಿ ವರದಿ ಕೇಳಬೇಕು. ಇದಕ್ಕೆ ಕಾರಣಕರ್ತರಾದ ಸಚಿವರು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ವಿಚಾರಣೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.

 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.