ಬುಧವಾರ, ಆಗಸ್ಟ್ 10, 2022
21 °C
ಗ್ರಾಮ ಪಂಚಾಯಿತಿ ಚುನಾವಣೆ

ಚುನಾವಣೆ: ಪತ್ನಿಗೆ ಎಸ್‌ಟಿ ಪ್ರಮಾಣಪತ್ರ ನೀಡುತ್ತಿಲ್ಲ ಎಂದು ವಿಷ ಸೇವಿಸಿದ ಪತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಫಜಲಪುರ (ಕಲಬುರ್ಗಿ ಜಿಲ್ಲೆ): ‘ತಾಲ್ಲೂಕಿನ ಗೌರ (ಬಿ) ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿರುವ ಶ್ರೀದೇವಿ ಕೋಳಿ ಅವರಿಗೆ ತಹಶೀಲ್ದಾರ್ ಎಸ್‌ಟಿ ಪ್ರಮಾಣಪತ್ರ ನೀಡುತ್ತಿಲ್ಲ’ ಎಂದು ಆರೋಪಿಸಿ ಕೋಲಿ ಸಮಾಜದ ಮುಖಂಡರು ಶನಿವಾರ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು.

ಧರಣಿ ಸ್ಥಳದಲ್ಲೇ ಶ್ರೀದೇವಿ ಅವರ ಪತಿ ಶರಣಬಸಪ್ಪ ದಿವಾಣಜಿ ವಿಷ ಸೇವಿಸಿದರು. ತಕ್ಷಣವೇ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ,  ಕಲಬುರ್ಗಿಯ ಜಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಯಿತು.

‘ಗೌರ (ಬಿ) ಗ್ರಾಮದ ವಾರ್ಡ್‌ ಸಂಖ್ಯೆ 1 ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾಗಿದೆ. ಶ್ರೀದೇವಿ ಅವರು ಮಹಾರಾಷ್ಟ್ರದ ಸಲಗರ ಗ್ರಾಮದವರು. ಅಲ್ಲಿ ನೀಡಿರುವ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ಲಗತ್ತಿಸಿ ಅವರು ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ನಾಮಪತ್ರ ತಿರಸ್ಕೃತವಾಗುವ ಆತಂಕದಿಂದ ಸ್ಥಳೀಯ ಜಾತಿ ಪ್ರಮಾಣಪತ್ರಕ್ಕಾಗಿ ವಾರದ ಹಿಂದೆಯೇ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈವರೆಗೆ ಅವರಿಗೆ ಪ್ರಮಾಣಪತ್ರ ನೀಡಲಾಗಿಲ್ಲ’ ಎಂದು ಪ್ರತಿಭಟನಾಕಾರರು ದೂರಿದರು.

‘ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿದ ನಂತರವಷ್ಟೇ ನಿರ್ಧಾರ ಕೈಗೊಳ್ಳಲಾಗುವುದು’ ತಹಶೀಲ್ದಾರ್‌ ನಾಗಮ್ಮ ಎಂ.ಕೆ. ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು