ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈದರಾಬಾದ್‌ನಲ್ಲಿ 5.50 ಲಕ್ಷ ಬೀದಿ ನಾಯಿಗಳು: ಜಿಎಚ್‌ಎಂಸಿ ಅಧಿಕಾರಿ

Last Updated 23 ಫೆಬ್ರುವರಿ 2023, 13:13 IST
ಅಕ್ಷರ ಗಾತ್ರ

ಹೈದರಾಬಾದ್‌: ನಗರದಲ್ಲಿ ಸುಮಾರು 5.50 ಲಕ್ಷ ಬೀದಿ ನಾಯಿಗಳು ಇವೆ ಎಂದು ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌' (ಜಿಎಚ್‌ಎಂಸಿ) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬುಧವಾರ ಇಲ್ಲಿನ ಅಂಬರ್ಪೇಟ್ ಪ್ರದೇಶದಲ್ಲಿ ನಾಲ್ಕು ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕೊಂದು ಹಾಕಿದ್ದವು. ಈ ಭಯಾನಕ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಈ ಘಟನೆ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ಇದರಿಂದ ಎಚ್ಚೆತ್ತಿರುವ ಜಿಎಚ್‌ಎಂಸಿ ಅಧಿಕಾರಿಗಳು ಬೀದಿ ನಾಯಿಗಳ ನಿಯಂತ್ರಣಕ್ಕೆ ಮುಂದಾಗಿದ್ದಾರೆ.

ನಗರದ ವ್ಯಾಪ್ತಿಯಲ್ಲಿರುವ ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಮುಂದಾಗುವಂತೆ ನಗರ ಅಭಿವೃದ್ಧಿಯ ವಿಶೇಷ ಮುಖ್ಯ ಕಾರ್ಯದರ್ಶಿ ಅರವಿಂದ್ ಕುಮಾರ್ ಸೂಚಿಸಿದ್ದಾರೆ.

2011ರಲ್ಲಿ ನಗರದಲ್ಲಿ 8.50 ಲಕ್ಷ ಬೀದಿ ನಾಯಿಗಳಿದ್ದವು. ನಂತರ ಜಿಎಚ್‌ಎಂಸಿ ನಿಯಂತ್ರಣಕ್ಕೆ ಕಾರ್ಯಾಚರಣೆ ನಡೆಸಿತ್ತು. ಇದರ ಪರಿಣಾಮ ಬೀದಿ ನಾಯಿಗಳ ಸಂಖ್ಯೆಯಲ್ಲಿ ಕುಸಿತವಾಗಿತ್ತು. ಸದ್ಯ ನಗರದಲ್ಲಿ 5.5 ಲಕ್ಷ ನಾಯಿಗಳಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT