ನಾನು ಪ್ರಾಮಾಣಿಕ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ತುಮಕೂರು: ‘ನಾನು ಯಾವುದೇ ತಪ್ಪು ಮಾಡಿಲ್ಲ. ಅತ್ಯಂತ ಪ್ರಾಮಾಣಿಕವಾಗಿ ನಡೆದುಕೊಂಡಿದ್ದೇನೆ. ಎಂತಹ ಸಂದರ್ಭ ಬಂದರೂ ನ್ಯಾಯ ಸಮ್ಮತವಾಗಿ ಕೆಲಸ ಮಾಡುತ್ತೇನೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಾವುಕರಾದರು.
ನಗರದಲ್ಲಿ ಭಾನುವಾರ ಜಿಲ್ಲಾ ಆಡಳಿತ ಹಮ್ಮಿಕೊಂಡಿದ್ದ ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮಾಡಾಳ್ ಲಂಚ ಪಡೆಯುವಾಗ ಸಿಕ್ಕಿ ಬಿದ್ದಿರುವ ವಿಚಾರವನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹೋರಾಟ ಆರಂಭಿಸಿರುವುದು, ರಾಜೀನಾಮೆ ಕೇಳುತ್ತಿರುವುದನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ ಮುಖ್ಯಮಂತ್ರಿ, ‘ಯಾವ ಶಕ್ತಿ ಏನೇ ಮಾಡಿದರೂ ಕಾನೂನು ರೀತಿ ನಡೆದುಕೊಳ್ಳುತ್ತೇನೆ.
ಲೋಕಾಯುಕ್ತ ಸೇರಿದಂತೆ ಯಾವುದೇ ಸಂಸ್ಥೆಯನ್ನೂ ದುರುಪಯೋಗ ಪಡಿಸಿಕೊಂಡಿಲ್ಲ. ಇನ್ನೂ ಶಕ್ತಿ ತುಂಬುವ ಕೆಲಸ ಮಾಡಿದ್ದೇನೆ. ರಾಜಕೀಯಕ್ಕೆ ಬಂದು ಹಣ ಮಾಡಿಲ್ಲ’ ಎಂದು ಸಮರ್ಥನೆ ನೀಡಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.