ಗುರುವಾರ , ಜನವರಿ 21, 2021
21 °C

ರಾಮನಗರಕ್ಕೆ ಅಭ್ಯರ್ಥಿ ನಾನಲ್ಲ ಎಂದ ನಿಖಿಲ್ ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ‘ನಾನು ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಅಭ್ಯರ್ಥಿಯಲ್ಲ. ರಾಜಕೀಯ ಅಧಿಕಾರದ ಉದ್ದೇಶದಿಂದ ಈ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡಲು ಬಂದಿಲ್ಲ’ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.

ಕಾರ್ಯಕ್ರಮದ ನಿರೂಪಕರು ‘ಭಾವಿ ಶಾಸಕರಾದ ನಿಖಿಲ್ ಮಾತನಾಡಬೇಕು’ ಎಂದು ಹೇಳಿದರು. ಇದಕ್ಕೆ ತಮ್ಮ ಭಾಷಣದಲ್ಲಿ ಪ್ರತಿಕ್ರಿಯಿಸಿದ ನಿಖಿಲ್‌, ಕಾರ್ಯಕರ್ತರು ಈ ವಿಚಾರದಲ್ಲಿ ಗೊಂದಲ ಸೃಷ್ಠಿಸಬಾರದು ಎಂದು ಮನವಿ ಮಾಡಿದರು. ‘ತಾತ ದೇವೇಗೌಡರು, ತಂದೆ ಕುಮಾರಸ್ವಾಮಿ, ತಾಯಿ ಅನಿತಾರಿಗೆ ರಾಜಕೀಯ ನೆಲೆ ಕೊಟ್ಟ ಕ್ಷೇತ್ರವಿದು. ಹೀಗಾಗಿ ಕ್ಷೇತ್ರದ ಅಭಿವೃದ್ದಿಗೆ ಸಹಕರಿಸುವುದು ನನ್ನ ಜವಾಬ್ದಾರಿ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು