ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ 2 ವರ್ಷ ನಾನೇ ಮುಖ್ಯಮಂತ್ರಿ: ಬಿ.ಎಸ್.ಯಡಿಯೂರಪ್ಪ

Last Updated 11 ಜೂನ್ 2021, 19:53 IST
ಅಕ್ಷರ ಗಾತ್ರ

ಹಾಸನ: ಮುಖ್ಯಮಂತ್ರಿಯಾಗಿ ಮುಂದಿನ ಎರಡು ವರ್ಷ ತಾವೇ ಮುಂದುವರಿಯುವುದಾಗಿ ಬಿ.ಎಸ್‌.ಯಡಿಯೂರಪ್ಪ ಶುಕ್ರವಾರ ಇಲ್ಲಿ ತಿಳಿಸಿದರು.

‘ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಯಡಿಯೂರಪ್ಪ ಅವರನ್ನು ಬದಲಾಯಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್‌ ಸ್ಪಷ್ಟಪಡಿದ್ದಾರೆ. ಅವರ ಹೇಳಿಕೆಯಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನನ್ನ ಮೇಲೆ ಇಟ್ಟಿರುವ ವಿಶ್ವಾಸ ಉಳಿಸಿಕೊಳ್ಳಲು ರಾಜ್ಯದಾದ್ಯಂತ ಪ್ರವಾಸ ಮಾಡಿ, ಅಭಿವೃದ್ಧಿಗೆ ಶ್ರಮವಹಿಸಲಾಗುವುದು’ ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಹೇಮಾವತಿ ಜಲಾಶಯ ಯೋಜನೆ ಮುಳುಗಡೆ ಸಂತ್ರಸ್ತರ (ಎಚ್‌ಆರ್‌ಪಿ) ಹೆಸರಿನಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ಯಾರೇ ತಪ್ಪು ಮಾಡಿದ್ದರೂ, ಎಷ್ಟೇ ದೊಡ್ಡವರಾಗಿದ್ದರೂ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಕೋವಿಡ್‌ 19 ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿರುವುದರಿಂದ, ಹಣಕಾಸಿನ ಸ್ಥಿತಿ ನೋಡಿಕೊಂಡು ಕೋವಿಡ್‌ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ನೀಡುವ ಕುರಿತು ಚಿಂತನೆ ನಡೆಸಲಾಗಿದೆ. ಲಾಕ್‌ಡೌನ್ ನಿಂದಾಗಿ ರಾಜ್ಯದಲ್ಲಿ ಹಣಕಾಸು ಸ್ಥಿತಿ ಹದಗೆಟ್ಟಿದ್ದರೂ ಬಡವರ ಅನುಕೂಲಕ್ಕೆ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.

‘ರಮೇಶ್ ಜಾರಕಿಹೊಳಿ ಪ್ರಕರಣದಲ್ಲಿ, ಕಾನೂನು ಅದರದೇ ಆದ ಕ್ರಮ ಕೈಗೊಳ್ಳುತ್ತದೆ. ‌ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT