ಮಂಗಳವಾರ, ಸೆಪ್ಟೆಂಬರ್ 28, 2021
26 °C

ಅಣ್ಣಾಮಲೈ ಪ್ರತಿಭಟನೆ... ಐ ಡೋಂಟ್‌ ಕೇರ್‌ ಎಂದ ಬಸವರಾಜ ಬೊಮ್ಮಾಯಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ರಾಜಕೀಯ ಕಾರಣಕ್ಕಾಗಿ ಪ್ರತಿಭಟನೆ ಮಾಡಬಹುದು. ಅವರನ್ನು ದೊಡ್ಡ ಮನುಷ್ಯನನ್ನಾಗಿ ಮಾಡಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಸುಪ್ರೀಂಕೋರ್ಟ್‌, ಬೆಂಗಳೂರು ನಗರಕ್ಕೆ ಕುಡಿಯುವ ಉದ್ದೇಶಕ್ಕಾಗಿ 6 ಟಿಎಂಸಿಯಷ್ಟು ಹೆಚ್ಚುವರಿ ಹಂಚಿಕೆ ಮಾಡಿದೆ. ಅದಕ್ಕಾಗಿ ಮೇಕೇದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಅಣ್ಣಾಮಲೈ ಅವರನ್ನು ದೊಡ್ಡ ಮನುಷ್ಯನನ್ನಾಗಿ ಮಾಡಬೇಕಾಗಿಲ್ಲ. ರಾಜಕೀಯ ಕಾರಣಕ್ಕೆ ಪ್ರತಿಭಟನೆ ಮಾಡುತ್ತಾರೆ.  ಪ್ರತಿಭಟನೆ ಮಾಡಿದರೆ, ಐ ಡೋಂಟ್‌ ಕೇರ್‌. ಅನುಮತಿ ತೆಗೆದುಕೊಂಡು ಮಾಡೇ ತೀರುತ್ತೇವೆ. ತಮಿಳುನಾಡು ಹಿಂದಿನಿಂದಲೂ ಕರ್ನಾಟಕದ ಎಲ್ಲ ಯೋಜನೆಗಳಿಗೂ ಅಡ್ಡಿ ಮಾಡುತ್ತಲೇ ಬಂದಿದೆ ಎಂದು ಬೊಮ್ಮಾಯಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು