ಮಂಗಳವಾರ, ಸೆಪ್ಟೆಂಬರ್ 28, 2021
25 °C

ಇಂದಿರಾ ಹೆಸರಿನ ಕ್ಯಾಂಟೀನ್‌ಅನ್ನು ವಿರೋಧಿಸಲಾರೆ: ಬಿಜೆಪಿ ಸಂಸದ ಸಿದ್ದೇಶ್ವರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ‘ಇಂದಿರಾ ಹೆಸರಿನ ಕ್ಯಾಂಟೀನ್‌ ಅನ್ನು ನಾನು ವಿರೋಧಿಸುವುದಿಲ್ಲ’ ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ‘ಇಂದಿರಾ ಗಾಂಧಿ ಪ್ರಧಾನಿಯಾಗಿ ಹತ್ತು ಹದಿನೈದು ವರ್ಷ ಆಡಳಿತ ಮಾಡಿದ್ದಾರೆ. ಅವರು ದೇಶದ ನಾಯಕಿಯಾಗಿದ್ದವರು. ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ ಆಡಳಿತ ಅಲ್ಲಗೆಳೆಯಲು ಆಗುವುದಿಲ್ಲ. ಕ್ಯಾಂಟೀನ್ ಹೆಸರು ಕುರಿತು ರಾಜ್ಯ ಸರ್ಕಾರ ತೀರ್ಮಾನಿಸಲಿದೆ’ ಎಂದರು.

ಮೇಕೆದಾಟು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ಯಾರೇ ಪ್ರತಿಭಟನೆ ಮಾಡಲಿ ಮೇಕೆದಾಟು ಮಾಡಿಯೇ ತಿರುತ್ತೇವೆ. ಈಗಾಗಲೇ ಮುಖ್ಯಮಂತ್ರಿಯವರು ಈ ಬಗ್ಗೆ ನಿರ್ಧಾರ ಮಾಡಿದ್ದಾರೆ. ಯಾರಿಗೂ ಜಗ್ಗುವ ಬಗ್ಗುವ ಮಾತಿಲ್ಲ’ ಎಂದು ಎಚ್ಚರಿಸಿದರು.

‘ಈ ವಿಚಾರವಾಗಿ ಸಿ.ಟಿ.ರವಿ  ಏನು ಹೇಳಿದ್ದಾರೋ ಗೊತ್ತಿಲ್ಲ. ನಮ್ಮ ನಾಡಿನ ರಕ್ಷಣೆ ನಮ್ಮ ಹೊಣೆ. ಹೀಗಾಗಿ ಮೇಕೆದಾಟು ಯೋಜನೆ ಮಾಡಿಯೇ ಮಾಡುತ್ತೇವೆ’ ಎಂದರು.

‘ಹುಕ್ಕಾ ಬಾರ್ ಬಗ್ಗೆ ನನಗೆ ಏನೂಂತ ಗೊತ್ತಿಲ್ಲ’ ಎಂದು ಸಿದ್ದೇಶ್ವರ ಉತ್ತರಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು