ಶನಿವಾರ, ಫೆಬ್ರವರಿ 4, 2023
28 °C

ಬಿಜೆಪಿಯವರು ಹಣದ ಆಫರ್ ಕೊಟ್ಟಿದ್ದರು: ಶಾಸಕ ಶ್ರೀಮಂತ ಪಾಟೀಲ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಳಗಾವಿ: ‘ನಾನು ಕಾಂಗ್ರೆಸ್‌ನಿಂದ ಬರುವುದಕ್ಕೆ ಬಿಜೆಪಿಯವರು ಹಣದ ಆಫರ್‌ ಕೊಟ್ಟಿದ್ದು ನಿಜ. ಎಷ್ಟು ಹಣ ಬೇಕೆಂದು ಕೇಳಿದ್ದರು. ಒಂದು ಪೈಸೆಯನ್ನೂ ಪಡೆಯುವುದಿಲ್ಲ, ಸರ್ಕಾರ ಬಂದ ನಂತರ ಒಳ್ಳೆಯ ಸ್ಥಾನಮಾನ ಕೊಡಿ ಚೆನ್ನಾಗಿ ನಿರ್ವಹಿಸಿ ಜನಸೇವೆ ಮಾಡುತ್ತೇನೆ ಎಂದು ಹೇಳಿದ್ದೆ’ ಎಂದು ಕಾಗವಾಡ ಬಿಜೆಪಿ ಶಾಸಕ ಶ್ರೀಮಂತ ಪಾಟೀಲ ಸ್ಫೋಟಕ ಹೇಳಿಕೆ ನೀಡಿದರು. 

ಜಿಲ್ಲೆಯ ಕಾಗವಾಡ ತಾಲ್ಲೂಕಿನ ಐನಾಪೂರದಲ್ಲಿ ಪತ್ರಕರ್ತರೊಂದಿಗೆ ಶನಿವಾರ ಮಾತನಾಡಿದ ಅವರು, ‘ಹಣ ಪಡೆಯದೆ ಬಿಜೆಪಿ ಸೇರಿದ್ದೇನೆ. ಯಾವ ಕಾರಣದಿಂದ ಸಚಿವ ಸಂಪುಟದಲ್ಲಿ ನನಗೆ ಸ್ಥಾನ ಕೊಟ್ಟಿಲ್ಲವೋ ಗೊತ್ತಿಲ್ಲ. ಮುಂದಿನ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆ ನಡೆದಾಗ ಖಂಡಿತವಾಗಿಯೂ ಅವಕಾಶ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು