ಸೋಮವಾರ, ಆಗಸ್ಟ್ 15, 2022
27 °C

ಯಡಿಯೂರಪ್ಪರನ್ನು ಸಿ.ಎಂ ಮಾಡಿದ್ದೇ ನಾನು: ಚಂದ್ರಕಾಂತ ಬೆಲ್ಲದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಧಾರವಾಡ: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರನ್ನು ಬೆಳೆಸಿ ಮುಖ್ಯಮಂತ್ರಿಯನ್ನಾಗಿ ಮಾಡಿದ್ದೇ ನಾನು’ ಎಂದು ಬಿಜೆಪಿಯ ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಜೆಪಿ ಹೈಕಮಾಂಡ್ ಸೂಚಿಸಿದರೆ ಯಡಿಯೂರಪ್ಪ ಅವರು ರಾಜೀನಾಮೆ ಕೊಡುವುದು ಸೂಕ್ತ’ ಎಂದರು.

‘ನಾನು ಮಾಧ್ಯಮಗಳ ಮೂಲಕ ರಾಜಕಾರಣದಲ್ಲಿ ಆಗುತ್ತಿರುವ ಬದಲಾವಣೆ ವಿಚಾರಗಳನ್ನು ಗಮನಿಸುತ್ತಿದ್ದೇನೆ. ರಾಜ್ಯದಲ್ಲಿ ಮುಖ್ಯಮಂತ್ರಿಯಾಗಲು ಯಾರು ಸಮರ್ಥರಿದ್ದಾರೆ? ಯಾರಿಗೆ ಅವಕಾಶ ನೀಡಬೇಕು? ಎಂಬುದು ಹೈಕಮಾಂಡ್‌ಗೆ ಬಿಟ್ಟಿದ್ದು. ನನ್ನ ಮಗ ಅರವಿಂದ ಅವರನ್ನು ಮುಖ್ಯಮಂತ್ರಿ ಮಾಡುವುದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು