ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ: ಬಸವರಾಜ ಹೊರಟ್ಟಿ

ಬೆಂಗಳೂರು: ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ. ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದು
ಜೆಡಿಎಸ್ನ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.
ವಿಧಾನಪರಿಷತ್ ಕಲಾಪ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಅವರು, ಫೆ. 8ರಿಂದ 19ರವರೆಗೆ ಮೂರು ದಿನಗಳ ಕಾಲ ವಿಧಾನಪರಿಷತ್ ಕಲಾಪ ವಿಸ್ತರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಕಾರ್ಯಕಲಾಪ, ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಬೇಕಿದೆ. ಜೊತೆಗೆ ಸಭಾಪತಿ ಚುನಾವಣೆ ಪ್ರಕ್ರಿಯೆ ಕೂಡ ನಡೆಯಬೇಕಿದೆ. ಹೀಗಾಗಿ ಮೂರು ದಿನ ಕಲಾಪ ವಿಸ್ತರಣೆಗೆ ತೀರ್ಮಾನಿಸಲಾಗಿದೆ. ನಾನೇ ಬಹುತೇಕ ಸಭಾಪತಿ ಅಭ್ಯರ್ಥಿ ಆಗುತ್ತೇನೆ. ನಮ್ಮ ಪಕ್ಷ ತೀರ್ಮಾನ ಮಾಡಿದೆ ಎಂದು ಹೊರಟ್ಟಿ ತಿಳಿಸಿದ್ದಾರೆ.
ಈ ಮಧ್ಯೆ, ಗೋಹತ್ಯೆ ನಿಷೇಧ ಕಾಯ್ದೆ ವಿಚಾರದಲ್ಲಿ ಪಕ್ಷದ ತೀರ್ಮಾನದ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ನಾಯಕರನ್ನು ಕೇಳಿ ಹೇಳುತ್ತೇನೆ ಎಂದಿದ್ದಾರೆ. ಎಂದಿದ್ದಾರೆ.
ಸಭಾಪತಿ ರಾಜೀನಾಮೆ ಕಾರಣ ಉಪಸಭಾಪತಿ ಎಂ.ಕೆ ಪ್ರಾಣೇಶ್ ನೇತೃತ್ವದಲ್ಲಿ ವಿಧಾನಪರಿಷತ್ ಕಲಾಪ ಸಲಹಾ ಸಮಿತಿ ಸಭೆ ನಡೆಯಿತು. .
ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೋಟ ಶ್ರೀನಿವಾಸ್ ಪೂಜಾರಿ, ಮಹಾಂತೇಶ್ ಕವಟಗಿಮಠ್, ಬಿ.ಕೆ ಹರಿಪ್ರಸಾದ್, ಎಂ. ನಾರಾಯಣಸ್ವಾಮಿ ಭಾಗಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.