ಮಂಗಳವಾರ, ಜನವರಿ 25, 2022
25 °C

ಜನರ ಪ್ರೀತಿ ಇರುವೆಡೆ ಸ್ಪರ್ಧೆ: ಸಿದ್ದರಾಮಯ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 

ಬಾಗಲಕೋಟೆ: ‘ನನಗೆ ಜನರು ಎಲ್ಲಿ ಪ್ರೀತಿಯಿಂದ ಕರೆಯುತ್ತಾರೆಯೋ ಅಲ್ಲಿ ಚುನಾವಣೆಗೆ ನಿಲ್ಲುವೆ. ಬಾದಾಮಿಯಲ್ಲಿ ಕರೆಯುತ್ತಾರೆ, ಮುಂದಿನ ಬಾರಿಯೂ ಇಲ್ಲಿಯೇ ಸ್ಪರ್ಧಿಸುವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಬಾದಾಮಿ ಬದಲು ಮುಸ್ಲಿಮರ ಮತ ಹೆಚ್ಚಿರುವ ಬೆಂಗಳೂರಿನ ಚಾಮರಾಜಪೇಟೆ ಕ್ಷೇತ್ರದಲ್ಲಿ ನಿಲ್ಲಲಿದ್ದಾರೆ’ ಎಂಬ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ಹೀಗೆ ಪ್ರತಿಕ್ರಿಯಿಸಿದರು.

‘ಎಲ್ಲಿ ಸ್ಪರ್ಧಿಸಬೇಕು ಎಂದು ಈಶ್ವರಪ್ಪನನ್ನು ಕೇಳಿ ನಿರ್ಧರಿಸಲು ಆಗುತ್ತದೆ ಯೇ? ನಾನು ಚಾಮರಾಜಪೇಟೆಯಲ್ಲಿ ನಿಲ್ಲುವುದಾಗಿ ಹೇಳಿದ್ದೇನಾ? ಈಶ್ವರಪ್ಪ ಯಾರು ನನಗೆ ಹೇಳಲು?’ ಎಂದು ತಿರುಗೇಟು ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು