ಶನಿವಾರ, ನವೆಂಬರ್ 26, 2022
23 °C
ಕುತೂಹಲ ಹೆಚ್ಚಿಸಿದ ಸಿಎಂ ಹೇಳಿಕೆ

ಇದೇ 26ಕ್ಕೆ ವರಿಷ್ಠರು ನೀಡುವ ಸೂಚನೆ ಪಾಲಿಸಲು ಸಿದ್ಧ: ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇದೇ 26ಕ್ಕೆ ಸರ್ಕಾರ ಎರಡು ವರ್ಷ ಪೂರೈಸುತ್ತದೆ. ಆ ದಿನ ಪಕ್ಷದ ವರಿಷ್ಠರು ಯಾವ ಸಂದೇಶ ಕಳುಹಿಸುತ್ತಾರೋ ಅದನ್ನು ಚಾಚೂ ತಪ್ಪದೇ ಪಾಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಪಕ್ಷವನ್ನು ಸದೃಢಗೊಳಿಸಿ ಮತ್ತೆ ಅಧಿಕಾರಕ್ಕೆ ತರುವುದು ನನ್ನ ಗುರಿ. ಪಕ್ಷದ ಸಂಘಟನೆಗೆ ಹೆಚ್ಚಿನ ಒತ್ತು ನೀಡುತ್ತೇನೆ’ ಎಂದರು. 

‘ಪಕ್ಷದ ವರಿಷ್ಠರು ನನಗೆ ಯಾವುದೇ ಸೂಚನೆ ನೀಡಿದರೂ ಪಾಲಿಸುತ್ತೇನೆ. ನನ್ನ ಪರವಾಗಿ ಯಾರೂ ಹೇಳಿಕೆಗಳನ್ನು ನೀಡಬಾರದು ಮತ್ತು ಪ್ರತಿಭಟನೆ ನಡೆಸಬಾರದು’ ಎಂದು ಮನವಿ ಮಾಡಿದ್ದಾರೆ.

‘ಸದ್ಯದ ಸನ್ನಿವೇಶದಲ್ಲಿ ಕಾರ್ಯಕರ್ತರು ಗೊಂದಲಕ್ಕೆ ಒಳಗಾಗಬಾರದು. ರಾಜ್ಯದ ವಿವಿಧ ಮಠಾಧೀಶರು ನನ್ನ ಬಗ್ಗೆ ತೋರಿಸಿದ ವಿಶೇಷ ಕಾಳಜಿಯ ಬಗ್ಗೆ ಧನ್ಯವಾದ ಹೇಳುತ್ತೇನೆ. ಇಡೀ ದೇಶದಲ್ಲಿ 75 ವರ್ಷ ಮೀರಿದ ಯಾರಿಗೂ ಬಿಜೆಪಿಯಲ್ಲಿ ಅಧಿಕಾರ ನೀಡಿಲ್ಲ. ಪ್ರಧಾನಿ ಮೋದಿ, ಅಮಿತ್‌ ಷಾ ಮತ್ತು ನಡ್ಡಾ ಅವರು ನನ್ನ ಮೇಲೆ ವಿಶೇಷ ಕಾಳಜಿ ತೋರಿಸಿ ಅಧಿಕಾರ ನೀಡಿದ್ದಾರೆ. ಇದೇ 26 ಕ್ಕೆ ಎರಡು ವರ್ಷ ಅಧಿಕಾರ ಪೂರೈಸುತ್ತೇನೆ. ಕೇಂದ್ರದ ನಾಯಕರು ನೀಡುವ ಸೂಚನೆ ಪಾಲಿಸಲು ಸಿದ್ಧ’ ಎಂದು ತಿಳಿಸಿದರು.

ಇದನ್ನೂ ಓದಿ: ಬಿ.ಎಸ್‌ ಯಡಿಯೂರಪ್ಪ ಪರ ‘ಶ್ರೀ’ ಶಕ್ತಿ: ಮಠಾಧೀಶರ ಬೆಂಬಲ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು