ಬುಧವಾರ, ಸೆಪ್ಟೆಂಬರ್ 29, 2021
20 °C
'ನಾಯಕತ್ವದ ತೀರ್ಮಾನಕ್ಕೆ ಬದ್ಧವಾಗಿ ಕೆಲಸ ಮಾಡುತ್ತೇವೆ'

ಸಿಕ್ಕಿತೇ ಹೈಕಮಾಂಡ್ ಸಂದೇಶ..? ಕಾದು ನೋಡೋಣ ಎಂದ ಸಿಎಂ ಬಿಎಸ್‌ವೈ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ‘ನಮ್ಮ ಪಕ್ಷದಲ್ಲಿ ನಾನೊಬ್ಬನೇ ನಾಯಕ ಏನಲ್ಲ. ಅನೇಕ ಹಿರಿಯ ನಾಯಕರು ಇದ್ದಾರೆ. ನಾಯಕತ್ವದ ತೀರ್ಮಾನಕ್ಕೆ ಬದ್ಧವಾಗಿ ಕೆಲಸ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲೂ ಪಕ್ಷ ಅಧಿಕಾರಕ್ಕೆ ತರಲು ಶ್ರಮಿಸುತ್ತೇವೆ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನೂರು ಜನರಂತಹ ಸಿದ್ದರಾಮಯ್ಯ ಬಂದರೂ ನಾವು ಅಧಿಕಾರಕ್ಕೆ ಬರುವುದನ್ನು ತಡೆಯಲಾಗುವುದಿಲ್ಲ’ ಎಂದು ಹೇಳಿದರು.

‘ಸಿದ್ದರಾಮಯ್ಯ ಹೇಳಿಕೆಗಳಿಗೆ ಪ್ರತಿಕ್ರಿಯೆ‌ ಕೊಡುವುದಕ್ಕೆ ಬಯಸುವುದಿಲ್ಲ. ಪಕ್ಷವನ್ನು ಮುಂದೆಯೂ ಅಧಿಕಾರಕ್ಕೆ ತರುವುದೊಂದೇ ನನ್ನ ಗುರಿಯಾಗಿದೆ’ ಎಂದರು.

ಹೈಕಮಾಂಡ್‌ನಿಂದ ಸಂದೇಶ ಬಂದಿತೇ ಎಂಬ ಪ್ರಶ್ನೆಗೆ ಕಾದು ನೋಡೋಣ, ಕಾದು ನೋಡೋಣ ಎಂದಷ್ಟೇ ಹೇಳಿದರು.

ಇದಕ್ಕೂ ಮುನ್ನ ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ನಿರ್ವಹಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಪ್ರವಾಸಿ ಮಂದಿರದಲ್ಲಿ ಸಭೆ ನಡೆಸಿದರು.

ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಕಂದಾಯ ಸಚಿವ ಆರ್.ಅಶೋಕ್, ಶಾಸಕರು, ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಬಳಿಕ ಮಾತನಾಡಿದ ಯಡಿಯೂರಪ‍್ಪ ಅವರು, ಉತ್ತರ ಕನ್ನಡ ಜಿಲ್ಲೆಗೆ ಜುಲೈ 26ರಂದು ಭೇಟಿ ನೀಡಿ, ಪ್ರವಾಹ ಪರಿಸ್ಥಿತಿ ಪರಿಶೀಲಿಸುತ್ತೇನೆ ಎಂದು ತಿಳಿಸಿದರು.

ಇದನ್ನೂ ಓದಿ: ರಾಜೀನಾಮೆ ಕೊಡಲು ಸಿದ್ಧ ಎನ್ನುತ್ತಿರುವ ಬಿಎಸ್‌ವೈ ನಡೆ ನಿಗೂಢ!
ಇದನ್ನೂ ಓದಿ: ಸಂಜೆಯೊಳಗೆ ಹೈಕಮಾಂಡ್‌ನಿಂದ ಸಂದೇಶ ಬರಲಿದೆ: ಬಿಎಸ್‌ವೈ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು