ರಾಷ್ಟ್ರರಾಜಕಾರಣಕ್ಕೆ ಹೋಗೊಲ್ಲ: ಸಿದ್ದರಾಮಯ್ಯ

ಬಾಗಲಕೋಟೆ: ರಾಷ್ಟ್ರರಾಜಕಾರಣಕ್ಕೆ ಹೋಗಲು ನನಗೆ ಇಷ್ಟವಿಲ್ಲ. ಮನುಷ್ಯ ತನ್ನ ಶಕ್ತಿ ಮೀರಿ ಯೋಚಿಸಬಾರದು. ಪ್ರಧಾನಮಂತ್ರಿ, ಕೇಂದ್ರ ಮಂತ್ರಿ ಆಗಬೇಕು ಅನ್ನೋ ಆಸೆ ನನಗಿಲ್ಲ. ಹೀಗಾಗಿ ದೆಹಲಿ ರಾಜಕಾರಣಕ್ಕೆ ಹೋಗೊಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ಗುಳೇದಗುಡ್ಡದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಜಾತಿ, ದುಡ್ಡು ಯಾವುದೂ ಮುಖ್ಯ ಅಲ್ಲ. ಪ್ರಜಾಪ್ರಭುತ್ವದ ಮೌಲ್ಯ ಅಳವಡಿಸಿಕೊಳ್ಳುವುದು ಮುಖ್ಯ. ತಾಲ್ಲೂಕು ಬೋರ್ಡ್ ಮೆಂಬರ್ ಆಗಿ ಕೆಳಹಂತದಿಂದ ರಾಜಕೀಯಕ್ಕೆ ಬಂದವನು ನಾನು. ಇಲ್ಲಿಗೆ ನನ್ನದು ಕೊನೆಯದು ಎಂದು ಹೇಳಿದರು.
‘ಕಾಂಗ್ರೆಸ್ ಮುಕ್ತ ಭಾರತ ಮಾಡ್ತೀವಿ ಅನ್ನುತ್ತಿದ್ದೀರಿ ಮೋದಿ, ನೆನಪು ಮಾಡಿಕೊಳ್ಳಿ 1980ರಲ್ಲಿ ನೀವು ಎರಡೇ ಸ್ಥಾನ ಗೆದ್ದಿದ್ರಿ. ಪ್ರಜಾಪ್ರಭುತ್ವದಲ್ಲಿ ಕಾಲಚಕ್ರ ತಿರುಗುತ್ತಿರುತ್ತದೆ. ಮೇಲಿದ್ದವರು ಕೆಳಗೆ ಬರಲೇಬೇಕು. ಕೆಳಗೆ ಇದ್ದವರು ಮೇಲೆ ಹೋಗಬೇಕು. ರಾಜಕಾರಣ ಅನ್ನೋದು ಗಣಿತ ಅಲ್ಲ‘ ಎಂದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.