ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಪಿಎಸ್ ಅಧಿಕಾರಿ ಡಿ.ರೂಪಾ ಆರೋಪಗಳಿಗೆ ರೋಹಿಣಿ ಸಿಂಧೂರಿ ಪ್ರತಿಕ್ರಿಯೆ ಏನು?

Last Updated 19 ಫೆಬ್ರುವರಿ 2023, 14:18 IST
ಅಕ್ಷರ ಗಾತ್ರ

ಬೆಂಗಳೂರು: ಜೆಡಿಎಸ್‌ ಶಾಸಕ ಸಾ.ರಾ.ಮಹೇಶ್ ​ಹಾಗೂ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಸಂಧಾನ ಯತ್ನ ವಿಚಾರ ಮಾಧ್ಯಮಗಳಲ್ಲಿ ಬಹಿರಂಗವಾಗಿತ್ತು. ಇದರ ಬೆನ್ನಲ್ಲೇ ರೋಹಿಣಿ ವಿರುದ್ಧ ಸಾಮಾಜಿಕ ಮಾಧ್ಯಮಗಳ ಮೂಲಕ ಕಿಡಿಕಾರಿದ್ದ ಐಪಿಎಸ್‌ ಅಧಿಕಾರಿ ಡಿ.ರೂಪಾ ಮೌದ್ಗಿಲ್, ಕರ್ತವ್ಯ ಲೋಪ ಸೇರಿದಂತೆ ಹಲವು ಆರೋಪಗಳನ್ನು ಮಾಡಿದ್ದರು. ಇದೀಗ ಈ ಆರೋಪಗಳಿಗೆ ರೋಹಿಣಿ ಸಿಂಧೂರಿ ಪ್ರತಿಕ್ರಿಯಿಸಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಸಿಂಧೂರಿ, ಮಾನಸಿಕ ಅಸ್ವಸ್ಥತೆ ಬಹುದೊಡ್ಡ ಸಮಸ್ಯೆ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಈ ರೀತಿ ವರ್ತಿಸುವುದು ಅಪಾಯಕಾರಿ. ಡಿ.ರೂಪಾ ಅವರು ಜವಾಬ್ದಾರಿಯುತ ಸ್ಥಾನದಲ್ಲಿದ್ದಾರೆ. ನನ್ನ ಮೇಲೆ ಹಗೆ ತೀರಿಸಿಕೊಳ್ಳಲು ಮಾನಸಿಕ ಸ್ಥಿಮಿತತೆ ಕಳೆದುಕೊಂಡವರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಮುಂದುವರಿದು, ವೈಯಕ್ತಿಕ ಹಗೆಯನ್ನಿಟ್ಟುಕೊಂಡು ನನ್ನ ವಿರುದ್ಧ ಸುಳ್ಳು ಹಾಗೂ ವೈಯಕ್ತಿಕ ನಿಂದನೆಯ ಅಭಿಯಾನ ನಡೆಸುತ್ತಿದ್ದಾರೆ. ಸಾಮಾಜಿಕ ಮಾಧ್ಯಮಗಳಿಂದ ತೆಗೆದ ಫೋಟೊಗಳನ್ನು ನನ್ನ ತೇಜೋವಧೆಗೆ ಬಳಸಿಕೊಳ್ಳುತ್ತಿದ್ದಾರೆ. ಈ ಫೋಟೊಗಳನ್ನು ನಾನು ಕೆಲವು ಅಧಿಕಾರಿಗಳಿಗೆ ಕಳುಹಿಸಿದ್ದೇನೆ ಎಂದು ಆರೋಪಿಸಿರುವ ರೂಪಾ, ಸದರಿ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಸರ್ವಿಸ್‌ ಕಂಡಕ್ಟ್‌ ರೂಲ್ಸ್‌ (ಸೇವಾ ನಡತೆ ನಿಯಮ) ಉಲ್ಲಂಘಿಸಿರುವ ರೂಪಾ ವಿರುದ್ಧ ಸಕ್ಷಮ ಪ್ರಾಧಿಕಾರಕ್ಕೆ ದೂರು ನೀಡುತ್ತೇನೆ. ಭಾರತೀಯ ದಂಡ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಲ್ಲ ರೀತಿಯ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಎಚ್ಚರಿಸಿದ್ದಾರೆ.

ನನ್ನ ವಿರುದ್ಧ ಮಾಡಿರುವ ಆರೋಪಗಳಿಂದ ನಾನು ಸ್ವಲ್ಪವೂ ವಿಚಲಿತಳಾಗುವುದಿಲ್ಲ. ಕರ್ತವ್ಯವನ್ನು ಶ್ರದ್ಧೆ ಹಾಗೂ ನಿಷ್ಠೆಯಿಂದ ಮುಂದುವರಿಸುತ್ತೇನೆ ಎಂಬುದನ್ನು ಇಂತಹ ಕ್ಷುಲ್ಲಕ ವ್ಯಕ್ತಿಗಳಿಗೆ ತಿಳಿಸಲು ಬಯಸುತ್ತೇನೆ ಎಂದೂ ತಿರುಗೇಟು ನೀಡಿದ್ದಾರೆ.

ರೋಹಿಣಿ ಸಿಂಧೂರಿ ಅವರು ಮಾಧ್ಯಮಗಳಿಗೆ ಬಿಡುಗಡೆ ಮಾಡಿರುವ ಹೇಳಿಕೆ ಇಲ್ಲಿದೆ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT