ಶುಕ್ರವಾರ, ಅಕ್ಟೋಬರ್ 30, 2020
27 °C

ಐಎಎಸ್‌ ಅಧಿಕಾರಿಗಳ ವರ್ಗ: ರೋಹಿಣಿ ಸಿಂಧೂರಿ ಮೈಸೂರಿನ ಹೊಸ ಜಿಲ್ಲಾಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ವರ್ಗಾವಣೆಯಾಗಿ ತಿಂಗಳು ಕಳೆವ ಮೊದಲೇ ಮೈಸೂರು ಜಿಲ್ಲಾಧಿಕಾರಿ ಬಿ.ಶರತ್ ಎತ್ತಂಗಡಿಯಾಗಿದ್ದು, ಅವರ ಜಾಗಕ್ಕೆ ನೂತನ ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ದಾಸರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಯೋಜನೆ ಮಾಡಲಾಗಿದೆ.

ಇದರ ಜೊತೆಗೆ ರಾಜೇಂದ್ರ ಚೋಳನ್‌ ಅವರನ್ನು ಬೆಂಗಳೂರು ಸ್ಮಾರ್ಟ್‌ ಸಿಟಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ. ಬಿಬಿಎಂಪಿಯ ಆಸ್ತಿ ವಿಭಾಗದ ವಿಶೇಷ ಆಯುಕ್ತರಾಗಿರುವ ಜೆ. ಮಂಜುನಾಥ್‌ ಅವರನ್ನು ಬಿಬಿಎಂಪಿಯ ಆಡಳಿತ ವಿಭಾಗದ ವಿಶೇಷ ಆಯುಕ್ತರನ್ನಾಗಿ ನೇಮಿಸಲಾಗಿದೆ.

ಬೆಂಗಳೂರು ಸ್ಮಾರ್ಟ್‌ ಸಿಟಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸ್ಥಾನದಲ್ಲಿದ್ದ ಹೆಪ್ಸಿಬಾ ರಾಣಿ ಕೊರ್ಲಪತಿ ಅವರನ್ನು ಮುಂದಿನ ಆದೇಶದ ವರೆಗೆ ಬಿಬಿಎಂಪಿಯ ಆಸ್ತಿ ವಿಭಾಗದ ವಿಶೇಷ ಆಯುಕ್ತರಾಗಿ ನಿಯೋಜಿತರಾಗಿದ್ದಾರೆ.

ರಾಜ್ಯ ರೇಷ್ಮೆ ಮಾರುಕಟ್ಟೆ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕ ಎಂ. ಆರ್‌ ರವಿ ಕುಮಾರ್‌ ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಿಸಲಾಗಿದೆ.


ಪಿ ಶಿವಶಂಕರ್

ಪಂಚಾಯತ್‌ ರಾಜ್‌ ಇಲಾಖೆಯ ನಿರ್ದೇಶಕ ಪಿ ಶಿವಶಂಕರ್‌ ಅವರನ್ನು ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ನೇಮಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು