ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುತಿನ ಚೀಟಿ ತೋರಿಸಿದರೆ ಲಸಿಕೆ

Last Updated 14 ಜನವರಿ 2021, 20:01 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್ ಲಸಿಕೆ ವಿತರಣೆ ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರು ಹೆಸರು ನೋಂದಣಿ ಸಮಯದಲ್ಲಿ ನೀಡಿದ ಗುರುತಿನ ಚೀಟಿಯನ್ನು ತೋರಿಸಿದರೆ ಮಾತ್ರ ಲಸಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದೇ 16ರಿಂದ ಲಸಿಕೆ ವಿತರಣೆ ಪ್ರಾರಂಭವಾಗಲಿದೆ. ಈಗಾಗಲೇ ಆನ್‌ಲೈನ್‌ನಲ್ಲಿ ಹೆಸರು ನೋಂದಾಯಿಸಿಕೊಂಡವರ ಮೊಬೈಲ್‌ ಸಂಖ್ಯೆಗೆ ನಿಗದಿತ ಸ್ಥಳ, ದಿನಾಂಕ ಹಾಗೂ ಸಮಯದ ಮಾಹಿತಿಯ ಸಂದೇಶವನ್ನು ಕಳುಹಿಸಲಾಗುತ್ತದೆ. ಅದರ ಅನುಸಾರ ಬಂದು ಲಸಿಕೆಯನ್ನು ಪಡೆಯಬೇಕು.ಲಸಿಕೆ ಅಭಿಯಾನ ನಡೆಯುವ ಸ್ಥಳದಲ್ಲಿ ವ್ಯಕ್ತಿಯ ಭಾವಚಿತ್ರ ಇರುವ ಗುರುತಿನ ಚೀಟಿಯನ್ನು ತೋರಿಸಬೇಕು. ಅದನ್ನು ಕೇಂದ್ರದಲ್ಲಿನ ಸಿಬ್ಬಂದಿ ಪರಿಶೀಲನೆ ನಡೆಸುತ್ತಾರೆ ಎಂದು ಇಲಾಖೆ ಸೂಚಿಸಿದೆ.

ದೇಶದಾದ್ಯಂತ ವಿತರಿಸಲಾಗುತ್ತಿರುವ ಕೋವಿಡ್‌ ಲಸಿಕೆಗಳು ಸುರಕ್ಷಿತವಾಗಿವೆ. ವಿವಿಧ ಹಂತಗಳಲ್ಲಿ ಅವುಗಳ ಸುರಕ್ಷತೆ ಹಾಗೂ ಫಲಿತಾಂಶದ ಬಗ್ಗೆ ಪರೀಕ್ಷೆ ನಡೆಸಲಾಗಿದೆ. ಹಾಗಾಗಿ ಯಾವುದೇ ರೀತಿಯ ಗೊಂದಲಕ್ಕೆ ಒಳಗಾಗದೆಯೇ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದು ಇಲಾಖೆ ಮನವಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT