ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಂಷಾ ನದಿ ದಡದಲ್ಲಿ ವಿಷ್ಣುವಿನ ವಿಗ್ರಹ ಪತ್ತೆ

Last Updated 23 ಫೆಬ್ರವರಿ 2023, 22:01 IST
ಅಕ್ಷರ ಗಾತ್ರ

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಗುಡ್ಡೇನಹಳ್ಳಿ ಗ್ರಾಮದ ಸಮೀಪದ ಶಿಂಷಾ ನದಿಯ ದಡದಲ್ಲಿ ಬಳಪದ ಕಲ್ಲಿನಲ್ಲಿ ಕೆತ್ತಲಾಗಿರುವ ನಾಲ್ಕು ಅಡಿ ಎತ್ತರದ ವಿಷ್ಣುವಿನ ಪುರಾತನ ವಿಗ್ರಹ ಪತ್ತೆಯಾಗಿದೆ.

ಗುಡ್ಡೇನಹಳ್ಳಿ ಗ್ರಾಮದ ಯೋಗೀಶ್ ಎಂಬುವರ ತೋಟಕ್ಕೆ ಹೊಂದಿಕೊಂಡಂತಿರುವ ತೊರೆಯ ಬಳಿಯ ನೀರಿನಲ್ಲಿ ಈ ವಿಷ್ಣುವಿನ ವಿಗ್ರಹ ಕಂಡುಬಂದಿದೆ. ಗ್ರಾಮಸ್ಥರು ಟ್ರ್ಯಾಕ್ಟರ್‌ನಲ್ಲಿ ಆಂಜನೇಯ ದೇವಾಲಯ ವಿಗ್ರಹವನ್ನು ಸಾಗಿಸಿದ್ದಾರೆ. ಈ ವಿಗ್ರಹ ಯಾವ ಕಾಲದ್ದು, ಎಷ್ಟು ವರ್ಷಗಳ ಹಿಂದಿನದು ಎನ್ನುವ ಮಾಹಿತಿ ಇನ್ನೂ ತಿಳಿದು ಬಂದಿಲ್ಲ.

ಶೆಟ್ಟಿಗೊಂಡನಹಳ್ಳಿಯಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಹಳ್ಳಿಕಾರ ಮಠಕ್ಕೆ ಈ ವಿಗ್ರಹ ಹಸ್ತಾಂತರಿಸಲು ನಿರ್ಧರಿಸಲಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT