ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ₹5000 ಕೋಟಿ: ಡಿಕೆಶಿ

Last Updated 25 ಮಾರ್ಚ್ 2023, 12:44 IST
ಅಕ್ಷರ ಗಾತ್ರ

ಬೆಂಗಳೂರು: ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗಾಗಿ ₹5000 ಕೋಟಿ ನೀಡಲಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶನಿವಾರ ಹೇಳಿದ್ದಾರೆ.

ಯಾದಗಿರಿ ಜಿಲ್ಲೆಯ ಸೈದಾಪುರದಲ್ಲಿ ಬ್ಲಾಕ್ ಕಾಂಗ್ರೆಸ್ ಕಚೇರಿ ಉದ್ಘಾಟನೆ ಹಾಗೂ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿದ ಬಳಿಕ ಈ ಕುರಿತು ಡಿ.ಕೆ. ಶಿವಕುಮಾರ್ ಟ್ವೀಟ್ ಮಾಡಿದ್ದಾರೆ.

ಬಡವರ ಉನ್ನತಿಗಾಗಿ ಕಾಂಗ್ರೆಸ್ ಪಕ್ಷ ಹಲವು ಯೋಜನೆಗಳನ್ನು ನೀಡಿದೆ. ಕಾಂಗ್ರೆಸ್ ಆಡಳಿತದಲ್ಲಿ ಕಲಬುರಗಿಯಲ್ಲಿ ಭವ್ಯ ಕಟ್ಟಡಗಳು ನಿರ್ಮಾಣವಾಗಿದ್ದು, ಕಾರ್ಮಿಕರ ಮಕ್ಕಳು ಕೂಡ ಮೆಡಿಕಲ್ ಕಾಲೇಜಿನಲ್ಲಿ ಶಿಕ್ಷಣ ಪಡೆಯುತ್ತಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಕೊಡುಗೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.

ಜನರಿಗೆ ಆದಾಯವಿಲ್ಲ. ಆದರೂ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ತಲುಪಿದೆ. ಬೆಲೆಯೇರಿಕೆಯಿಂದಾಗಿ ನೊಂದಿರುವ ಕರುನಾಡಿನ ಜನರಿಗಾಗಿ ಕಾಂಗ್ರೆಸ್ ಪಕ್ಷ 4 ಗ್ಯಾರಂಟಿಯನ್ನು ಘೋಷಣೆ ಮಾಡಿದೆ. ನುಡಿದಂತೆ ನಡೆಯುವ ನಮ್ಮ ಪಕ್ಷ ಆಡಳಿತಕ್ಕೆ ಬರುವುದು ನಿಶ್ಚಿತ. ಜನಪರ ಆಡಳಿತಕ್ಕಾಗಿ ಕಾಂಗ್ರೆಸ್ ಬೆಂಬಲಿಸಿ ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT