ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಗೊತ್ತಿಲ್ಲದಿದ್ದರೆ ಬಡ್ತಿಗೆ ತಡೆ: ರಾಜ್ಯ ಸರ್ಕಾರ

Last Updated 19 ಆಗಸ್ಟ್ 2021, 14:38 IST
ಅಕ್ಷರ ಗಾತ್ರ

ಬೆಂಗಳೂರು: ಸರ್ಕಾರಿ ನೌಕರರು ಕಂಪ್ಯೂಟರ್ ಪರೀಕ್ಷೆಯಲ್ಲಿ ಉತ್ತೀರ್ಣರಾಗದೇ ಇದ್ದರೆ ವಾರ್ಷಿಕ ವೇತನ ಬಡ್ತಿ, ಬಡ್ತಿಗೆ ಸಂಚಕಾರ ಬರಲಿದೆ.

‘ನೇರ ನೇಮಕಾತಿ ಹೊಂದಿರುವ ಮತ್ತು ಸೇವಾನಿರತ ಸರ್ಕಾರಿ ನೌಕರರಿಗೆ ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆಯನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರ, ನಿಗದಿತ ಅಂಕಪಡೆದು ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು ಎಂದು ಇದೇ 19ರಂದು ಹೊರಡಿಸಿರುವ ಅಧಿಸೂಚನೆಯಲ್ಲಿ ಸೂಚಿಸಿದೆ.

ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ) ನಿಯಮಗಳು 1(3)ರಲ್ಲಿ ನಿರ್ದಿಷ್ಟಪಡಿಸಿರುವ ಹುದ್ದೆಗಳನ್ನು ಹೊರತುಪಡಿಸಿ, ಇನ್ನಿತರ ಎಲ್ಲ ಅಭ್ಯರ್ಥಿಗಳಿಗೆ ಈ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರ ಅನುಮೋದಿಸಿರುವ ಕಿಯೋನಿಕ್ಸ್‌ ಸಂಸ್ಥೆಯ ಮೂಲಕ ಪರೀಕ್ಷೆಯನ್ನು ನಡೆಸಲಾಗುತ್ತದೆ.

2022ರ ಮಾರ್ಚ್ 22ರೊಳಗೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕು. ಅನುತ್ತೀರ್ಣರಾಗುವ ನೌಕರರು ಪರಿವೀಕ್ಷಣಾ ಅವಧಿ, ಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಪಡೆಯಲು ಅನರ್ಹರಾಗಿರುತ್ತಾರೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT