ಮಂಗಳವಾರ, ನವೆಂಬರ್ 24, 2020
25 °C
ಚುನಾವಣಾ ಪ್ರಚಾರದಲ್ಲಿ ಎಚ್‌.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಕಚೇರಿಗೆ ತಡವಾಗಿ ಬಂದರೆ ರೇಗುತ್ತಿದ್ದರು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದಷ್ಟೂ ದಿನ ಕಾಂಗ್ರೆಸ್‌ ಶಾಸಕರು ನಿರಂತರವಾಗಿ ನನಗೆ ಕಿರುಕುಳ ನೀಡಿದ್ದರು. ನಾನು ಕಚೇರಿಗೆ ತಡವಾಗಿ ಬಂದರೂ ಅವರು ರೇಗುತ್ತಿದ್ದರು’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಆರ್‌.ಆರ್‌.ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಲಕ್ಷ್ಮೀದೇವಿನಗರ ವಾರ್ಡ್‌ನಲ್ಲಿ ಗುರುವಾರ ಪಕ್ಷದ ಅಭ್ಯರ್ಥಿ ಪರ ಪ್ರಚಾರದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ಒಂದು ದಿನ ಕೃಷ್ಣಾದಲ್ಲಿ ಜನರ ಸಮಸ್ಯೆ ಆಲಿಸಿ, ಬಳಿಕ ಕಚೇರಿಗೆ ಹೋಗಿದ್ದೆ. ಅಲ್ಲಿ ಕಾದಿದ್ದ ಕಾಂಗ್ರೆಸ್‌ ಶಾಸಕರೊಬ್ಬರು ಎಷ್ಟು ಹೊತ್ತು ಕಾಯಬೇಕು ಎಂದು ರೇಗಿದರು. ಅವರು ತಂದಿದ್ದ ಪತ್ರಗಳನ್ನು ಇಸ್ಪೀಟ್‌ನಂತೆ ನನ್ನತ್ತ ಎಸೆದಿದ್ದರು’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು