ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಠ್ಯದಲ್ಲಿ ಇಲ್ಲದ ಪ್ರಶ್ನೆ ಇದ್ದರೆ ಕೃಪಾಂಕ: ಅಶ್ವತ್ಥನಾರಾಯಣ

Last Updated 28 ಆಗಸ್ಟ್ 2020, 20:48 IST
ಅಕ್ಷರ ಗಾತ್ರ

ಬೆಂಗಳೂರು: ‘ಎಂಜಿನಿಯರಿಂಗ್ ಪರೀಕ್ಷೆಯಲ್ಲಿ ಪಠ್ಯದಲ್ಲಿ ಇಲ್ಲದ ಪ್ರಶ್ನೆಗಳನ್ನು ಕೇಳಿದ್ದಾರೆ ಎಂಬ ವಿಷಯ ಗಮನಕ್ಕೆ ಬಂದಿದೆ. ಪಠ್ಯದಲ್ಲಿ ಇಲ್ಲದ ಪ್ರಶ್ನೆ ಕೇಳಿದ್ದರೆ, ಆ ಪ್ರಶ್ನೆಗಳಿಗೆ ನಿಗದಿಯಾದಷ್ಟು ಅಂಕಗಳನ್ನು ಕೃಪಾಂಕ ರೂಪದಲ್ಲಿ ನೀಡಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಶುಕ್ರವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ (ವಿಟಿಯು) ಕುಲಪತಿ ಪ್ರೊ. ಕರಿಸಿದ್ದಪ್ಪ ಅವರೊಂದಿಗೆ ಈ ಬಗ್ಗೆ ಚರ್ಚಿಸಿದ್ದು, ಕಾನೂನು ಪರಿಮಿತಿಯಲ್ಲಿ ವಿದ್ಯಾರ್ಥಿಗಳ ಹಿತ ರಕ್ಷಿಸಲಾಗುವುದು' ಎಂದರು.

‘ಅಂತಿಮ ವರ್ಷದ ಎಂಜಿನಿಯರಿಂಗ್‌ ಪರೀಕ್ಷೆಗೆ ಶೇ.99ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಕಳೆದ ವರ್ಷಗಳಲ್ಲಿ ನಡೆದ ಪರೀಕ್ಷೆಗಳಿಗೆ ಹೋಲಿಸಿದರೆ ಈ ವರ್ಷ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಗೆ ಗೈರಾದವರಿಗೆ ಕ್ಯಾರಿಓವರ್‌ ಮಾಡಿಕೊಳ್ಳುವ ಅವಕಾಶ ಕಲ್ಪಿಸಲಾಗಿದೆ. ಮುಂದಿನ ಸೆಮಿಸ್ಟರ್‌ ಹೊತ್ತಿಗೆ ಅವರು ಪರೀಕ್ಷೆ ಬರೆಯಬಹುದು’ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT