ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನನ್ನ ಹೇಳಿಕೆಯಿಂದ ನೋವಾಗಿದ್ದರೆ ಅದಕ್ಕಾಗಿ ವಿಷಾದ ವ್ಯಕ್ತಪಡಿಸುವೆ: ಕೆ. ಸುಧಾಕರ್

Last Updated 24 ಮಾರ್ಚ್ 2021, 13:22 IST
ಅಕ್ಷರ ಗಾತ್ರ

ಬೆಂಗಳೂರು: ಯಾರಿಗಾದರೂ ನನ್ನ ಹೇಳಿಕೆಯಿಂದ ನೋವಾಗಿದ್ದಲ್ಲಿ ಅದಕ್ಕಾಗಿ ವಿಷಾದ ವ್ಯಕ್ತಪಡಿಸುತ್ತೇನೆ. ನಮ್ಮ 17 ಜನರ ವಿರುದ್ದ ತೇಜೋವಧೆ ಯತ್ನ ನಡೆಸಿದ್ದ ಕೆಲ ನಾಯಕರ ವಿರುದ್ಧ ಮಾತ್ರವೇ ನಾನು ಹೇಳಿಕೆ ನೀಡುವ ಯತ್ನ ಮಾಡಿದ್ದೇನೆಯೇ ಹೊರತು ಎಲ್ಲಾ ಶಾಸಕರಿಗೆ ನೋವು ಉಂಟು ಮಾಡುವ ಉದ್ದೇಶ ನನಗಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೆಲ ನಾಯಕರ ಏಕಪಕ್ಷೀಯ, ಪೂರ್ವಗ್ರಹ ಪೀಡಿತ ಹೇಳಿಕೆಗಳಿಂದ ಬೇಸತ್ತು ಅವರ ನೈತಿಕತೆಯನ್ನು ಪ್ರಶ್ನಿಸಿ ಬೆಳಗ್ಗೆ ನಾನು ಮಾಧ್ಯಮಗಳಿಗೆ ನೀಡಿದ್ದ ಹೇಳಿಕೆ ಬೇರೆ ಬೇರೆ ಆಯಾಮಗಳನ್ನು ಪಡೆದುಕೊಂಡಿದೆ. ಎಲ್ಲಾ ಮಾನ್ಯ ಶಾಸಕ ಮಿತ್ರರ ಬಗ್ಗೆ ನಾನು ಅಪಾರವಾದ ಗೌರವ ಇಟ್ಟುಕೊಂಡಿದ್ದೇನೆ ಎಂದಿದ್ದಾರೆ.

ಕೆಲ ದಿನಗಳಿಂದ ಮಹತ್ವದ ರಾಜ್ಯ ಬಜೆಟ್ ಅಧಿವೇಶನದಲ್ಲಿ ಕಲಾಪ ನಡೆಯಲು ಬಿಡದೆ ಅನಾವಶ್ಯಕ ವಿಚಾರಗಳನ್ನು ಪ್ರಸ್ತಾಪಿಸಿ ಸದನದ ಮತ್ತು ಶಾಸಕರ ಸಮಯ ವ್ಯರ್ಥ ಮಾಡಿರುವ ಕಾಂಗ್ರೆಸ್, ರಾಜಕೀಯ ದುರುದ್ದೇಶದಿಂದ 6 ಮಂದಿ ಸಚಿವರ ತೇಜೋವಧೆ ಮಾಡಲು ಯತ್ನಿಸುತ್ತಿದೆ ಎಂದು ದೂರಿದ್ದಾರೆ.

6 ಜನ ಮಂತ್ರಿಗಳ ವಿರುದ್ಧ ನಿರಂತರ ಶಂಕೆ, ಆರೋಪ ಮಾಡುತ್ತಿರುವಾಗ ಅವರಿಗಾಗಿರಬಹುದಾದ ಅವಮಾನ, ಮಾನಸಿಕ, ಭಾವನಾತ್ಮಕ ನೋವು ಅರಿವಾಗಲಿಲ್ಲ. ಆದರೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು ಎನ್ನುವ ನನ್ನ ಹೇಳಿಕೆ ಕೆಲವರಿಗೆ ಬಹಳ ತಪ್ಪಾಗಿ ಕಾಣುತ್ತಿದೆ. ನನ್ನ ಹೇಳಿಕೆಯನ್ನು ಶಬ್ದಶಃ ಅರ್ಥೈಸದೆ, ನಮ್ಮ ಸ್ಥಾನದಲ್ಲಿ ನಿಂತು, ಅದರ ಹಿಂದಿರುವ ಆಘಾತ, ವೇದನೆ, ಭಾವನೆಗಳನ್ನು ಅವಲೋಕಿಸಿ, ಅರ್ಥ ಮಾಡಿಕೊಳ್ಳಬೇಕೆಂದು ನಿವೇದನೆ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.

ಇದಕ್ಕೂ ಮುನ್ನ ಮತ್ತೊಂದು ಟ್ವೀಟ್‌ನಲ್ಲಿ, ನನ್ನ ಹೇಳಿಕೆಯನ್ನು ಅರ್ಥ ಮಾಡಿಕೊಳ್ಳಬೇಕಾದ ಮಹಾನಾಯಕರು ಅರ್ಥ ಮಾಡಿಕೊಂಡರೆ ಸಾಕು. ಇಡೀ ರಾಜ್ಯದ ಜನರನ್ನು ತಪ್ಪು ದಾರಿಗೆ ಎಳೆದು ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಮಹಾನಾಯಕರ ಮುಖವಾಡ ಕಳಚುವ ಉದ್ದೇಶವಷ್ಟೇ ನನ್ನ ಹೇಳಿಕೆಯ ಹಿಂದೆ ಇತ್ತು. ನಮ್ಮಗಳ ತೇಜೋವಧೆ ಮಾಡಲು ಹೊರಟವರ ಉದ್ದೇಶ ಈಡೇರುವುದಿಲ್ಲ ಎಂದು ಹೇಳಿದ್ದಾರೆ.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT