ಭಾನುವಾರ, ಮೇ 16, 2021
25 °C

ಅಕ್ರಮ ಗಣಿಗಾರಿಕೆ ದಂಡ ಪ್ರಮಾಣ ಇಳಿಕೆ: ನಿರಾಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ರಾಜ್ಯದಾದ್ಯಂತ ಅಕ್ರಮ ಗಣಿಗಾರಿಕೆಯನ್ನು ಡ್ರೋನ್ ‌ಮೂಲಕ‌ ಸಮೀಕ್ಷೆ ‌ನಡೆಸಿ‌ ವಿಧಿಸಿದ್ದ ಐದು ಪಟ್ಟು ದಂಡವನ್ನು ಬದಲಿಸಿ, ಸದ್ಯ ಒಂದು ಪಟ್ಟು ಮಾತ್ರ ವಿಧಿಸಲು ನಿರ್ಧರಿಸಲಾಗಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಚಿಕ್ಕಬಳ್ಳಾಪುರ ಮತ್ತು ಶಿವಮೊಗ್ಗದಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಗಳ ನಂತರ ಗಣಿಗಾರಿಕೆ ಕಂಪನಿಗಳ ಪರವಾನಗಿ ಮತ್ತು ದಂಡ ಪ್ರಮಾಣದಲ್ಲಿ ಬದಲಾವಣೆ ಮಾಡಲಾಗಿದೆ’ ಎಂದರು.

‘ಕಾನೂನುಬಾಹಿರ ಗಣಿಗಾರಿಕೆ ‌ನಡೆಯುವ ಕಡೆ ಡ್ರೋನ್ ‌ಸಮೀಕ್ಷೆ ‌ನಡೆಸಿ‌ ದಂಡ ವಿಧಿಸಲಾಗಿತ್ತು. ಸುಮಾರು ‌₹ 6 ಸಾವಿರ ಕೋಟಿ ಮೊತ್ತದ ದಂಡ ವಿಧಿಸಲಾಗಿತ್ತು. ಆದರೆ, ಗಣಿ ಮಾಲೀಕರು ಈ ದಂಡ ಐದು ಪಟ್ಟು ಹೆಚ್ಚಾಗಿದೆ ಎಂದು ಕೋರ್ಟ್‌ ಮೆಟ್ಟಿಲೇರಿದ್ದರು. ಅಲ್ಲದೆ, ಇದರಿಂದ ‌2 ಸಾವಿರಕ್ಕೂ ಹೆಚ್ಚು ಗಣಿಗಾರಿಕೆಗಳು ಬಂದ್ ಆಗಿವೆ’ ಎಂದು ಅವರು ವಿವರಿಸಿದರು.

‘ಗಣಿ ಸುರಕ್ಷತಾ ಮಹಾ ನಿರ್ದೇಶಕರಿಂದ (ಡಿಜಿಎಂಎಸ್) ಪರವಾನಗಿ ಪಡೆದುಕೊಳ್ಳಲು 90  ದಿನಗಳ ಕಾಲ ಅವಕಾಶ ನೀಡಲಾಗಿದೆ’ ಎಂದೂ ಅವರು ವಿವರಿಸಿದರು.

ತುರ್ತು ಕ್ರಮ: ‘ರಾಜ್ಯದಲ್ಲಿ ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಕೊರತೆಯ ಸಮಸ್ಯೆ ಉಂಟಾಗದಂತೆ ಇಲಾಖೆಯ ವತಿಯಿಂದ ಕೆಲವು ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಜಿಂದಾಲ್ ಸೇರಿದಂತೆ ಕೆಲವು ಕಂಪನಿಗಳ ಜೊತೆ ಮಾತುಕತೆ ನಡೆಸಲಾಗಿದದೆ’ ಎಂದರು.

‘ಸದ್ಯ ಜಿಂದಾಲ್‌ನಿಂದ 400 ಟನ್ ಆಕ್ಸಿಜನ್ ಸಿಗುತ್ತಿದೆ. ಬೇರೆ ಕಂಪನಿಗಳಿಂದ 200 ಟನ್ ಸೇರಿ ರಾಜ್ಯಕ್ಕೆ ಪ್ರತಿದಿನ ಒಟ್ಟು 600 ಟನ್ ಆಕ್ಸಿಜನ್ ಸಿಗಲಿದೆ. ನಮಗೆ ಇಷ್ಟು ಸಾಕಾಗಬಹುದು. ಬಂದ್‌ ಆಗಿರುವ ಬಲ್ಡೋಟಾ ಗಣಿ ಕಂಪನಿಯನ್ನು ಮತ್ತೆ ಆರಂಭಿಸಿ, ಆಕ್ಸಿಜನ್‌ ಪೂರೈಸುವಂತೆ ಸೂಚಿಸಲಾಗಿದೆ’ ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು