ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ರಮ ಆಸ್ತಿ: ಇಬ್ಬರು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

Last Updated 27 ಆಗಸ್ಟ್ 2020, 4:00 IST
ಅಕ್ಷರ ಗಾತ್ರ

ಬೆಂಗಳೂರು:ಅಕ್ರಮ ಆಸ್ತಿ ಸಂಪಾದನೆಯ ಆರೋಪದಲ್ಲಿ ಕೊಳಚೆ ನಿರ್ಮೂಲನಾ ಮಂಡಳಿ ಕಾರ್ಯದರ್ಶಿ ಎಂ.ಎಸ್. ನಿರಂಜನಬಾಬು ಮತ್ತು ಮೈಸೂರು ಮಹಾನಗರ ಪಾಲಿಕೆ ಅಭಿವೃದ್ಧಿ ಅಧಿಕಾರಿ (ವಲಯ–6) ಎಚ್‌. ನಾಗರಾಜ್ ಮನೆ ಸೇರಿ 6 ಕಡೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಬುಧವಾರ ದಾಳಿ ನಡೆಸಿದ್ದಾರೆ.

ನಿರಂಜನಬಾಬು ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಉಪ ಕಾರ್ಯದರ್ಶಿಯಾಗಿದ್ದರು. ತುಮಕೂರು ಜಿಲ್ಲೆಯ ಶೆಟ್ಟಿಹಳ್ಳಿಯ ಮಾರುತಿನಗರದಲ್ಲಿನ ಇವರ ವಾಸದ ಮನೆ, ಯಶವಂತಪುರ ಗೋಲ್ಡನ್ ಗ್ರ್ಯಾಂಡ್ ಅಪಾರ್ಟ್‌ಮೆಂಟ್‌ನಲ್ಲಿರುವ ‌ಸ್ನೇಹಿತನ ಮನೆ ಮೇಲೆ ದಾಳಿ ನಡೆಸಲಾಗಿದೆ.

‘ಎಚ್. ನಾಗರಾಜ್‌ ಅವರ ಕಚೇರಿ, ಮೈಸೂರಿನಲ್ಲಿನ ವಾಸದ ಮನೆ, ಭಾವಮೈದುನನ ಮನೆ, ಮಾಗಡಿಯಲ್ಲಿ ಸಹೋದರನ ಮನೆಗಳ ಮೇಲೆ ದಾಳಿ ಮಾಡಲಾಗಿದೆ.ಈ ಇಬ್ಬರು ಅಧಿಕಾರಿಗಳು ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿರುವ ಬಗ್ಗೆ ಮಾಹಿತಿ ಸಂಗ್ರಹಿಸಿ ದಾಳಿ ನಡೆಸಲಾಗಿದೆ. ಮಹತ್ವದ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಮುಂದುವರಿದಿದೆ’ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT